ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆಯುತ್ತಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ವಿರುದ್ಧ 14 ರನ್ ಗಳ ಭರ್ಜರಿ ಜಯ ಗಳಿಸಿದೆ.

ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು.ಆರಂಭಿಕ ಬ್ಯಾಟ್ಸ್‌ಮನ್ ಡಿ ಕಾಕ್ 7 ರನ್ ಗಳಿಸಿ ಬೇಗ ನಿರ್ಗಮಿಸಿದರು.ಆದರೆ ಮನನ್ ಒಹ್ರ ಆಕರ್ಷಕ 45 ರನ್ ಗಳಿಸಿದರು 31 ಎಸೆತಗಳಲ್ಲಿ 4 ಭರ್ಜರಿ ಸಿಕ್ಸರ್ ಮತ್ತು 2 ಬೌಂಡರಿ ಸಹಿತ 45 ರನ್ ಗಳಿಸಿದರು.ನಂತರ ಬಂದ ಮೆಕ್ಕುಲಮ್ ಮತ್ತು ವಿರಾಟ್ ಕೊಹ್ಲಿ ಉತ್ತಮ ಜೊತೆಯಾಟ ಆಡಿದರು.

ಮೆಕ್ಕುಲಮ್ 25 ಎಸೆತಗಳಲ್ಲಿ 2 ಸಿಕ್ಸರ್ 4 ಬೌಂಡರಿ ನೆರವಿನಿಂದ 37 ರನ್ ಗಳಿಸಿ ಔಟಾದರು ,ನಾಯಕ ವಿರಾಟ್ ಕೊಹ್ಲಿ ಸಹ 26 ಎಸೆತಗಳಲ್ಲಿ 32 ರನ್ ಗಳಿಸಿ ಔಟಾದರು .ನಂತರ ಮನ್ ದೀಪ್ ಸಿಂಗ್ 14 ರನ್ ಗಳಿಸಿ ಔಟಾದರು ಕೊನೆಯ ಆರು ಓವರ್ ಗಳಿಗೆ 5 ಪ್ರಮುಖ ವಿಜೆಟ್ ಗಳನ್ನು ಬೆಂಗಳೂರು ತಂಡ ಕಳೆದುಕೊಂಡಿತು.

ಕೊನೆಯ ಓವರ್ ನ ಕೊನೆಯ ಮೂರು ಎಸೆತಗಳಲ್ಲಿ ಸತತ ಮೂರು ಸಿಕ್ಸರ್ ಸಿಡಿಸಿ ಗ್ರಾಂಡಮ್ ತಂಡದ ಮೊತ್ತ 167 ಆಗುವಂತೆ ಮಾಡಿದರು.20 ಓವರ್‌ಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 7 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತು‌.

168 ರನ್ ಗಳ ಗುರಿ‌ ‌ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ ಮೊದಲ ಮೂರು ಓವರ್‌ಗಳಲ್ಲಿ ಪ್ರಮುಖ ಮೂರು ವಿಕೆಟ್ ಕಳೆದುಕೊಂಡಿತು.ಡುಮಿನಿ 23 ರನ್ ಗಳಿಸಿ ಔಟಾದರು.ಮುಂಬೈ ಪರ ಹಾರ್ಧಿಕ್ ಪಾಂಡ್ಯ ಅತ್ಯುತ್ತಮ ಆಟ ಆಡಿ ಅರ್ಧಶತಕ ಗಳಿಸಿದರು. ಆದರೂ ಮುಂಬೈ ಇಂಡಿಯನ್ಸ್ ತಂಡ ಅಂತಿಮವಾಗಿ 20 ಓವರ್‌ಗಳಲ್ಲಿ  7 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಲಷ್ಟೆ ಶಕ್ತವಾಗಿ ಸೋಲೊಪ್ಪಿಕೊಂಡಿತು‌.

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here