ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕಿಂಗ್ಸ್ ಇಲೆವನ್ ಪಂಜಾಬ್ ತಂಡಗಳ ನಡುವೆ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ನ ಪದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಿಂಗ್ಸ್ ಇಲೆವನ್ ಪಂಜಾಬ್ ತಂಡವನ್ನು 10 ವಿಕೆಟ್ ಗಳಿಂದ ಮಣಿಸಿದೆ.

ಟಾಸ್ ಗೆದ್ದ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ಬೆಂಗಳೂರು ತಂಡದ ಬೌಲರ್ ಗಳ ಕರಾರುವಾಕ್ಕಾದ ದಾಳಿಗೆ ಕಿಂಗ್ಸ್ ಇಲೆವನ್ ಪಂಜಾಬ್ ತಂಡ 15.1 ಓವರ್‌ಗಳಲ್ಲಿ ಕೇವಲ 88 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಅದ್ಭುತವಾದ ಬೌಲಿಂಗ್ ದಾಳಿ ನಡೆಸಿದ ಉಮೇಶ್ ಜಾದವ್ 4 ಓವರ್‌ಗಳಲ್ಲಿ 23 ರನ್ ಗಳನ್ನು ನೀಡಿ 3 ವಿಕೆಟ್ ಪಡೆದರು.88 ರನ್ನುಗಳ ಸಾಧಾರಣ ಮೊತ್ತ ಬೆನ್ನತ್ತಿದ RCB ಕೇವಲ 8 ಓವರ್‌ಗಳಲ್ಲಿ 10 ವಿಕೆಟ್ ಗಳ ಅಂತರದಿಂದ ಭರ್ಜರಿ ಜಯ ಗಳಿಸಿತು..

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ವಿರಾಟ್ ಕೊಹ್ಲಿ ಮತ್ತು ಪಾರ್ಥೀವ್ ಪಟೇಲ್ ಭರ್ಜರಿ ಬ್ಯಾಟಿಂಗ್ ನಡೆಸಿದರು. ನಾಯಕ ವಿರಾಟ್ ಕೊಹ್ಲಿ ಕೇವಲ 28 ಎಸೆತಗಳಲ್ಲಿ 4 ಬೌಂಡರಿ 2 ಸಿಕ್ಸರ್ ಸಹಿತ ಅಜೇಯ 48 ರನ್ ಗಳಿಸಿದರೆ ಪಾರ್ಥೀವ್ ಪಟೇಲ್ 22 ಎಸೆತಗಳಲ್ಲಿ 7 ಬೌಂಡರಿ ನೆರವಿನಿಂದ 40 ರನ್ ಗಳಿಸಿದರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here