Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಶೂ, ಸಾಕ್ಸ್‌ ಖರೀದಿಗೆ ಹಣ ಕಡಿತ.!

 

ಬೆಂಗಳೂರು: ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಶೂ, ಸಾಕ್ಸ್‌ ಖರೀದಿ ಮಾಡಲು ನೀಡಿದ್ದ ಅನುದಾನದಲ್ಲಿ 7 ಕೋಟಿ ರೂಪಾಯಿಗಳನ್ನು ಸರ್ಕಾರ ಕಡಿತ ಮಾಡಿ ಆದೇಶ ಹೊರಡಿಸಿದೆ.

2022-23ನೇ ಸಾಲಿನಲ್ಲಿ  ಸರ್ಕಾರ 1 ರಿಂದ 10 ನೇ ತರಗತಿ ಮಕ್ಕಳಿಗೆ 1 ಜೊತೆ ಶೂ, ಎರಡು ಜೊತೆ ಸಾಕ್ಸ್ ಖರೀದಿಗೆ 132 ಕೋಟಿ ಹಣ ಬಿಡುಗಡೆ ಮಾಡಿತ್ತು.

ಈಗ ಅದನ್ನು 125 ಕೋಟಿಗೆ ಇಳಿಸಲಾಗಿದೆ. ಉತ್ತಮ ಗುಣಮಟ್ಟದ ವಸ್ತುಗಳನ್ನು ನೀಡಲು ಸರ್ಕಾರ ಆದೇಶಿಸಿದ್ದು, ಹಣ ಸಾಕಾಗದಿದ್ದರೆ ಸಂಘ ಸಂಸ್ಥೆಗಳ ಮೊರೆ ಹೋಗುವಂತೆ ಸರ್ಕಾರ ಸೂಚಿಸಿದೆ.