ವಿಧಾನಸಭಾ ಚುನಾವಣೆಗೆ ಇನ್ನು ಉಳಿದಿರುವುದು ಹತ್ತೇ ದಿ‌ನ.ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲಾ ಪಕ್ಷಗಳಲ್ಲಿ ಪ್ರಚಾರದ ಕಾವು ಜೋರಾಗಿದೆ.ನೆನ್ನೆ ತಾನೆ ಬಿಜೆಪಿ ಪರ ನರೇಂದ್ರ ಮೋದಿಯವರು ಪ್ರಚಾರ ಮಾಡಿದ್ದರು.ಇಂದು ಕನ್ನಡ ಚಿತ್ರರಂಗದ ಹೆಸರಾಂತ ನಾಯಕ ಯಶ್ ಅವರು ಚುನಾವಣೆ ಪ್ರಚಾರ ಮಾಡಲಿದ್ದಾರೆ.

ವಿಶೇಷವಾಗಿ ರಾಕಿಂಗ್ ಸ್ಟಾರ್ ಯಶ್ ಅವರು ಇಂದು ಎರಡು ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ.ಈ ಮೊದಲು ಪ್ರಚಾರ ನಡೆಸುವ ಬಗ್ಗೆ ಹೇಳಿಕೆ ನೀಡಿದ್ದ ಯಶ್ ಅವರು ನಾನು ಪಕ್ಷದ ಪರವಾಗಿ ಪ್ರಚಾರ ಮಾಡಲ್ಲ.ಉತ್ತಮ ಅಭ್ಯರ್ಥಿಗಳ ಪರವಾಗಿ ಮಾತ್ರ ಪ್ರಚಾರ ಮಾಡುತ್ತೇನೆ ಎಂದಿದ್ದರು.

ಬಿಜೆಪಿಯಅಭ್ಯರ್ಥಿ ಕೆ.ಆರ್.ರಾಮದಾಸ್ ಮತ್ತು ಜೆಡಿಎಸ್ ಅಭ್ಯರ್ಥಿ ಸಾ.ರಾ.ಮಹೇಶ್ ಇಬ್ಬರು ಅಭ್ಯರ್ಥಿಗಳ ಪರವಾಗಿ ಇಂದು ಯಶ್ ಪ್ರಚಾರ ನಡೆಸಲಿದ್ದಾರೆ‌.ಇಂದು ಬೆಳಗ್ಗೆ 10 ಗಂಟೆಗೆ ಕೆ.ಆರ್. ನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸಾ.ರಾ. ಮಹೇಶ್ ಪರ ಪ್ರಚಾರ ನಡೆಸಲಿದ್ದಾರೆ.

10ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಯಶ್ ರೋಡ್ ಶೋ ನಡೆಸಿ ಸಾ.ರಾ. ಮಹೇಶ್ ಪರ ಮತಯಾಚಿಸಲಿದ್ದಾರೆ.ಸಂಜೆ 6ಕ್ಕೆ ಮೈಸೂರಿನ ಕೆ.ಆರ್. ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ರಾಮದಾಸ್ ಪರ ಯಶ್ ಪ್ರಚಾರ ನಡೆಸಲಿದ್ದಾರೆ. ಗನ್ ಹೌಸ್ ವೃತ್ತದಿಂದ ರಾಮದಾಸ್ ಪರ ರೋಡ್ ಶೋ ನಡೆಸಲಿದ್ದಾರೆ.

ಇದಲ್ಲದೇ ಮೇಮೇ 5ರಂದು ಸಹ ರಾಕಿಂಗ್ ಸ್ಟಾರ್ ಯಶ್ ಅವರು ಉತ್ತರಕನ್ನಡ ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here