ಅಂತರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ರೋಹಿತ್ ಶರ್ಮಾ ಮತ್ತೊಂದು ಹೊಸ ದಾಖಲೆ ಕ್ರಿಯೇಟ್ ಮಾಡಿದ್ದಾರೆ .ಭಾರತ ಮತ್ತು ವೆಸ್ಟ್ಇಂಡೀಸ್ ನಡುವಿನ ಅಂತಿಮ ಪಂದ್ಯದಲ್ಲಿ ಭಾರತದ ರೋಹಿತ್ ಶರ್ಮಾ ಏಕದಿನ ಪಂದ್ಯದಲ್ಲಿ 200 ಸಿಕ್ಸರ್ಗಳನ್ನು ವೇಗವಾಗಿ ಗಳಿಸಿದ ಬ್ಯಾಟ್ಸ್‌ಮನ್ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ. ಅಂತರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಇನ್ನಿಂಗ್ಸ್ ಒಂದರಲ್ಲಿ ಅತಿ ಹೆಚ್ಚು ರನ್ ಗಳಿಸಿ ದಾಖಲೆ ಸೃಷ್ಟಿಸಿದ್ದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಇದೀಗ ಅತಿ ವೇಗವಾಗಿ ಎರಡು ನೂರು ಸಿಕ್ಸರ್ ಗಳಿಸಿದ  ಬ್ಯಾಟ್ಸ್‌ಮನ್ ಆಗಿದ್ದಾರೆ.

ಭಾರತದ ರೋಹಿತ್ ಶರ್ಮಾ ಈ ಸಾಧನೆ ಮಾಡಲು ಕೇವಲ 187 ಇನ್ನಿಂಗ್ಸ್ ಗಳನ್ನು ತೆಗೆದುಕೊಂಡಿದ್ದಾರೆ.ಇದಕ್ಕೂ ಮೊದಲು ಪಾಕಿಸ್ತಾನದ ಆಲ್ ರೌಂಡರ್ ಶಾಹಿದ್ ಆಫ್ರಿದಿ ಅವರು 195 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ್ದಾರೆ.ಇದೇ ವೇಳೆ ರೋಹಿತ್ ಶರ್ಮಾ ಅವರು 2018 ರಲ್ಲಿ ವಿರಾಟ್ ಕೊಹ್ಲಿ ಮತ್ತು ಜಾನಿ ಬೈರ್ಸ್ಟೊ ನಂತರ 1,000 ಏಕದಿನ ರನ್ಗಳನ್ನು ಗಳಿಸಿದ ಮೂರನೇ ಬ್ಯಾಟ್ಸ್‌ಮನ್ ಎನ್ನುವ ಖ್ಯಾತಿಯನ್ನು ಪಡೆದರು.

ವಿಂಡಿಸ್ ವಿರುದ್ದ ಅಂತಿಮ ಪಂದ್ಯದಲ್ಲಿ 56 ಎಸೆತಗಳಲ್ಲಿ 63 ರನ್ ಗಳಿಸುವ ಮೂಲಕ ಮೂಲಕ ಈ ಎರಡು ದಾಖಲೆಗಳಿಗೆ ಸಾಕ್ಷಿಯಾದರು. ಆರಂಭಿಕ ಆಟಗಾರನಾಗಿ ರೋಹಿತ್ ಶರ್ಮಾ ಸತತ ಮೂರು ವರ್ಷಗಳ ಕಾಲ ನಿರಂತರವಾಗಿ ವರ್ಷವೊಂದರಲ್ಲಿ ಸಾವಿರ ರನ್ ಗಳನ್ನು ಪೂರೈಸಿದ ಸಾಧನೆ ಮಾಡಿದ್ದಾರೆ.ಇದಕ್ಕೂ ಮೊದಲು ಭಾರತದ ಪರ ಸೌರವ ಗಂಗೂಲಿ, ಸಚಿನ್ ತೆಂಡುಲ್ಕರ್ ಈ ಸಾಧನೆ ಮಾಡಿದ್ದರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here