ರಾಕಿಂಗ್ ಸ್ಟಾರ್ ಯಶ್ ಅವರಿಗೆ ಹೊಸದೊಂದು ಪ್ರಶಸ್ತಿಯು ಅರಸಿ ಬಂದಿದೆ‌. ಕೆಜಿಎಫ್ ಸಿನಿಮಾ ನಂತರ ಅವರು ಆಲ್ ಇಂಡಿಯಾ ಸ್ಟಾರ್ ಆದ ನಂತರ ಈಗ ಆ ಖ್ಯಾತಿಯ ಹಿಂದೆಯೇ ದಿ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದಾರೆ ರಾಕಿಂಗ್ ಸ್ಟಾರ್.
ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 Most Influential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆಯುವ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ನಿನ್ನೆ ಅಂದರೆ ಸೋಮವಾರ ಸಂಜೆ ಮುಂಬೈನಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆದಿದ್ದು, ಇದೇ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮೆರೆದಿರುವ, ಭಾರತದ 50 ಶ್ರೇಷ್ಠ ಯುವ ಪ್ರಭಾವ ಶಾಲಿಗಳಿಗೆ ಕೂಡಾ ಗೆ ಜಿಕ್ಯೂ ಇಂಡಿಯಾ ಪ್ರಶಸ್ತಿ ನೀಡಿ ಸತ್ಕರಿಸಲಾಗಿದೆ‌. ದಿ ಜಿಕ್ಯೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದ, ಸಾಧನೆಗೈದ 50 ಯುವ ಭಾರತೀಯರನ್ನು ಒಂದೆಡೆ ಸೇರಿಸಿ ಒಂದು ಸತ್ಕರಿಸಿದೆ.
ಯಶ್ ಅವರ ಭಾರತೀಯ ಚಿತ್ರರಂಗದಲ್ಲಿನ ಸಾಧನೆಗಾಗಿ ಈ ಯುವ ಪ್ರಭಾವ ಶಾಲಿ ವ್ಯಕ್ತಿಯಾಗಿ ಪ್ರಶಸ್ತಿ ನೀಡಲಾಗಿದೆ . ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಬಾಲಿವುಡ್‍ನ ಖ್ಯಾತ ನಿರ್ದೇಶಕ ಕರಣ್ ಜೋಹರ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

ಕರಣ್ ಜೋಹರ್ ನಟ ಯಶ್ ಅವರಿಗೆ 2019 ರ ಭಾರತೀಯ ಚಿತ್ರರಂಗದ ಪ್ರಭಾವ ಶಾಲಿ ಯುವ ಭಾರತೀಯ ಎಂಬ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಯಶ್ ಜಿಕ್ಯೂ ಇಂಡಿಯಾದ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯ ಭಾಗವಾಗಲು ನಿಜವಾಗಿಯೂ ವಿನಮ್ರ ಮತ್ತು ಗೌರವದಾಯಕ ಎನಿಸಿದೆ. ಚಿತ್ರರಂಗದಲ್ಲಿ ನಾವೆಲ್ಲಾ ಒಟ್ಟಿಗೆ ಸೇರಿ ಮಾಡುತ್ತಿರುವ ಸಾಧನೆಯನ್ನು ಗುರುತಿಸಿರುವುದಕ್ಕೆಧನ್ಯವಾದಗಳು. ಅಭಿಮಾನಿಗಳು ಹಾಗೂ ಹಿತೈಷಿಗಳಿಗೂ ಕೂಡಾ ಧನ್ಯವಾದಗಳನ್ನು ತಿಳಿಸಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here