ಬಜಾರ್ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟ ಎಂದೆನಿಸಿಕೊಂಡಿರುವ ಧನ್ವೀರ್ ಅಭಿನಯದ ಎರಡನೇ ಚಿತ್ರ “ಬಂಪರ್” ಮುಹೂರ್ತ ಆಚರಿಸಿಕೊಳ್ಳಲು ಸಜ್ಜಾಗಿದೆ. ಕನ್ನಡ ಚಿತ್ರರಂಗದ ಖ್ಯಾತ ವಿತರಕ ಮತ್ತು ನಿರ್ಮಾಪಕರೂ ಆಗಿರುವ ಸುಪ್ರೀತ್ ನಿರ್ಮಾಣದ “ಬಂಪರ್” ಚಿತ್ರವು ಇದೇ ಸಂಕ್ರಾಂತಿ ಹಬ್ಬದಂದು ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ ಮುಹೂರ್ತ ಆಚರಿಸಿಕೊಳ್ಳುತ್ತಿದ್ದು “ಬಂಪರ್” ಚಿತ್ರಕ್ಕೆ ಶುಭ ಹಾರೈಸಲು ಕನ್ನಡ ಚಿತ್ರರಂಗದ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಆಗಮಿಸುತ್ತಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಶಿಷ್ಯ ಎಂದೇ ಗುರುತಿಸಿಕೊಂಡಿರುವ ಧನ್ವೀರ್ ಅಭಿನಯದ ಎರಡನೇ ಚಿತ್ರ ಇದಾಗಿದೆ. ಈ ಹಿಂದೆ ಧನ್ವೀರ್ ಅಭಿನಯದ ಸಿಂಪಲ್ ಸುನಿ ನಿರ್ದೇಶನದ  ಬಜಾರ್ ಚಿತ್ರವು ಸೂಪರ್ ಹಿಟ್ ಆಗಿತ್ತು. ಇನ್ನು ಬಂಪರ್ ಚಿತ್ರಕ್ಕೆ ಅಲೆಮಾರಿ ಮತ್ತು ಕಾಲೇಜ್ ಕುಮಾರ್ ಸೇರಿದಂತೆ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶನ ಮಾಡಿರುವ ಹರಿ ಸಂತೋಷ್ ಅವರು ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಶ್ರೀಮುರಳಿ ಅಭಿನಯದ ಭರಾಟೆ ಚಿತ್ರವನ್ನು ನಿರ್ಮಿಸಿದ್ದ ಸುಪ್ರೀತ್ ಅವರು ಇದೀಗ ಬಂಪರ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.ಬಂಪರ್ ಚಿತ್ರವು ಕನ್ನಡ ಚಿತ್ರರಂಗದಲ್ಲಿ ಮುಹೂರ್ತಕ್ಕೂ ಮೊದಲೇ ಸಾಕಷ್ಟು ಸದ್ದು ಮಾಡುತ್ತಿರುವುದು ವಿಶೇಷ.ಇದರ ಜೊತೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸಾತ್ ಸಹ ಬಂಪರ್ ಚಿತ್ರಕ್ಕೆ ಸಿಗುತ್ತಿರುವುದು ಬಂಪರ್ ಚಿತ್ರಕ್ಕೆ ಆನೆಬಲ ಬಂದಂತಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here