ರಾಜ್ಯದಲ್ಲಿ ಕೊರೊನಾ ಆತಂಕದ ನಡುವೆ ಎಲ್ಲಾ ಶಾಲಾ ಕಾಲೇಜುಗಳನ್ನು ಕೂಡಾ ಮುಚ್ಚಿ ಮೂರು ತಿಂಗಳುಗಳು ಕಳೆದಿವೆ. ಕೊರೊನಾ ಭೀತಿ ಕಡಿಮೆಯಾಗದ ಹಿನ್ನೆಲೆಯಲ್ಲಿ ಇನ್ನೂ ಶಾಲಾ ಕಾಲೇಜು ತೆರೆಯುವ ಬಗ್ಗೆ ಯಾವುದೇ ನಿರ್ಣಯವನ್ನು ಮಾಡಿಲ್ಲ ಹಾಗೂ ಅದಕ್ಕೆ ಆತುರ ನಿರ್ಧಾರವನ್ನು ಮಾಡುವುದೂ ಇಲ್ಲ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ. ಈ ವಿಷಯವಾಗಿ ಇಂದು ಮಾತನಾಡುತ್ತಾ ಶಾಲಾ ಕಾಲೇಜುಗಳನ್ನು ಆರಂಭಿಸುವಂತಿದ್ದರೆ ಮೊದಲ ಹಂತದಲ್ಲಿ ಪಿಯುಸಿ, ಪ್ರೌಢಶಾಲೆಗಳಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಶಿಕ್ಷಣ ಸಚಿವರು ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದಂತಹ ಸಂದರ್ಭದಲ್ಲಿ ತಮ್ಮ ಭೇಟಿ ಮುಗಿಸಿ ಬರುವಾಗ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮೊದಲು ಪಿಯುಸಿ ಮತ್ತು ಪ್ರೌಢಶಾಲೆಗಳು ಅನಂತರ ಮಾಧ್ಯಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳು, ಬಳಿಕ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಕುರಿತಾಗಿ ಚಿಂತನೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಅಲ್ಲದೇ ಶಾಲಾ ಕಾಲೇಜುಗಳನ್ನು ತೆರೆಯುವ ದಿನಾಂಕದ ಬಗ್ಗೆ ಇನ್ನೂ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ ಎಂದಿರುವ ಅವರು ಆಗಸ್ಟ್ ನಂತರ ಇದರ ಬಗ್ಗೆ ಚರ್ಚೆ ನಡೆಸಲಾಗುವುದು ಎಂದಿದ್ದಾರೆ.

ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿರುವುದರಿಂದ ಶಾಲಾ ಕಾಲೇಜು ತೆರೆಯುವ ವಿಷಯವಾಗಿ ಯಾವುದೇ ನಿರ್ಧಾರವನ್ನು ಮಾಡಿಲ್ಲ ಎಂದಿರುವ ಅವರು ಅನುದಾನ ಮತ್ತು ಅನುದಾನ ರಹಿತ ಶಾಲೆಗಳ ಶಿಕ್ಷಕರ ವೇತನಕ್ಕೆ ಸಂಬಂಧಿಸಿದ ಹಾಗೆ ಸಂಘದ ಪ್ರತಿನಿಧಿಗಳ ಜೊತೆಗೆ ಮುಖ್ಯಮಂತ್ರಿ ಅವರು ಚರ್ಚಿಸಿ ನಿರ್ಧಾರವನ್ನು ತೆಗೆದುಕೊಳ್ಳುವರು ಎನ್ನಲಾಗಿದೆ. ಅಲ್ಲದೇ ಎಸ್.ಎಸ್.ಎಲ್.ಸಿ. ಪರೀಕ್ಷೆಗಳ ನಂತರ ಅನುದಾನ ರಹಿತ ಶಾಲೆಗಳ ಸಮಸ್ಯೆಗಳನ್ನು ಪರಿಹಾರಕ್ಕೆ ಶಿಕ್ಷಣ ಇಲಾಖೆಯು ಯೋಜನೆಯನ್ನು ರೂಪಿಸಲಿದೆ ಎಂದು ತಿಳಿಸಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here