ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಅವರು ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಇಂದಿಗೆ ಮೂವತ್ತು ನಾಲ್ಕು ವರ್ಷಗಳು ಕಳೆದಿವೆ. 34 ವರ್ಷಗಳಿಂದ ಕನ್ನಡ ಸಿನಿ ಪ್ರಿಯರನ್ನು ರಂಜಿಸುತ್ತಾ ಬದಿರುವ ಶಿವರಾಜಕುಮಾರ್ ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಅಪಾರ ಅಭಿಮಾನಿಗಳ ಬಳಗವನ್ನು ಹೊಂದಿದ್ದಾರೆ. ಇಂದು ಶಿವರಾಜ್ ಕುಮಾರ್ ಅಭಿನಯದ ಹೊಸ ಚಿತ್ರದ ಮುಹೂರ್ತ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ಆಚರಿಸಿಕೊಂಡಿದೆ. ತಮಿಳಿನ ಖ್ಯಾತ ಚಿತ್ರ ಸಂಸ್ಥೆ ಸತ್ಯಜ್ಯೋತಿ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಹೊಸ ಚಿತ್ರಕ್ಕೆ ಇನ್ನೂ ಯಾವುದೇ ಶೀರ್ಷಿಕೆ ಫೈನಲ್ ಆಗಿಲ್ಲ.

ಡಾ.ಶಿವರಾಜ್ ಕುಮಾರ್ ಅಭಿನಯದ ಈ ಹೊಸ ಚಿತ್ರಕ್ಕೆ ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ರವಿ ಅರಸು ಅವರು ನಿರ್ದೇಶನ ಮಾಡುತ್ತಿದ್ದಾರೆ. ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ಮುಹೂರ್ತ ಆಚರಿಸಿಕೊಂಡ ಈ ಚಿತ್ರಕ್ಕೆ ಶುಭ ಹಾರೈಸಲು ಬೆಂಗಳೂರಿನ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮತ್ತು ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್ ಕುಮರ್ ಸೇರಿ ಹಲವಾರು ಚಿತ್ರರಂಗದ ಗಣ್ಯರು ಹಾಗೂ ಶಿವರಾಜ್ ಕುಮಾರ್ ಅವರ ಅಪಾರ ಸಂಖ್ಯೆಯ ಅಭಿಮಾನಿಗಳು ಆಗಮಿಸಿದ್ದರು.

ಇಂದಿಗೆ ಶಿವರಾಜಕುಮಾರ್ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 34 ವರ್ಷ ಬಂದಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಶಿವರಾಜ್ ಕುಮಾರ್ ಅವರಿಗೆ ಶಿವಣ್ಣನವರ ಅಭಿಮಾನಿಗಳು ಹಾಗೂ ಚಿತ್ರರಂಗದ ವಿವಿಧ ರಂಗದ ಗಣ್ಯರು ಶುಭ ಹಾರೈಸಿದ್ದಾರೆ.

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here