ಸಂಕಷ್ಟಕ್ಕೆ ಸಿಲುಕಿ ತಮ್ಮ ಊರುಗಳಿಗೆ ಹೋಗಲಾರದೆ ಕಷ್ಟಪಡುತ್ತಿರುವ ವಲಸೆ ಕಾರ್ಮಿಕರನ್ನು ಅವರವರ ರಾಜ್ಯಗಳಿಗೆ ತಲುಪಿಸಲು ಹೆಚ್ಚಿನ ಸಂಖ್ಯೆಯಲ್ಲಿ ಶ್ರಮಿಕ ರೈಲುಗಳನ್ನು ಓಡಿಸಲು ರಾಜ್ಯ ಸರ್ಕಾರಗಳ ಅನುಮತಿಯ ಅವಶ್ಯಕತೆ ಇಲ್ಲವೆಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಈ ರೈಲುಗಳ ಸಂಚಾರಕ್ಕೆ ಸಂಬಂಧಿಸಿದ ಹಾಗೆ ಕೇಂದ್ರ ಗೃಹ ಸಚಿವಾಲಯವು ಹೊಸ ಮಾರ್ಗಸೂಚಿಯನ್ನು ಹೊರಡಿಸಿದ್ದು, ಅದರ ಅನ್ವಯ ರೈಲ್ವೆ ಸಚಿವಾಲಯವು ಶ್ರಮಿಕ್ ರೈಲುಗಳ ಕುರಿತಾಗಿ ಗೃಹ ಸಚಿವಾಲಯದ ಜೊತೆಗೆ ಸಮಾಲೋಚನೆ ನಡೆಸಿ ನಿರ್ಧಾರವನ್ನು ಮಾಡಬಹುದು ಎಂದು ತಿಳಿಸಲಾಗಿದೆ.

ಪಶ್ಚಿಮ ಬಂಗಾಳ ತನ್ನ ವಲಸೆ ಕಾರ್ಮಿಕರನ್ನು ರಾಜ್ಯದೊಳಗೆ ಪ್ರವೇಶ ನೀಡಲು ಒಪ್ಪಿಗೆ ನೀಡದೆ ಶ್ರಮಿಕ್ ರೈಲುಗಳು ರಾಜ್ಯ ಪ್ರವೇಶಿಸದಂತೆ ಆದೇಶವನ್ನು ಹೊರಡಿಸಿತ್ತು. ಈ ವಿಚಾರದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಜೊತೆಗೆ ತೀವ್ರವಾದ ಸಂಘರ್ಷದ ನಂತರ ಕೇಂದ್ರ ಗೃಹ ಸಚಿವಾಲಯ ಇಂತಹುದೊಂದು ನಿರ್ಧಾರವನ್ನು ಮಾಡಿದೆ. ರಾಜ್ಯ ಸರ್ಕಾರಗಳು ಶ್ರಮಿಕ್ ರೈಲುಗಳಿಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕೆಂದು, ರೈಲು ವೇಳಾಪಟ್ಟಿಗೆ ಅನ್ವಯವಾಗಿ ಕಾರ್ಮಿಕರನ್ನು ರೈಲ್ವೆ ನಿಲ್ದಾಣಕ್ಕೆ ತಲುಪಿಸಲು ಬಸ್ ಗಳ ವ್ಯವಸ್ಥೆ ಮಾಡಬೇಕೆಂದು ಕೂಡಾ ಕೇಂದ್ರ ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಕೊರೊನಾ ಸೋಂಕು ಹರಡುವ ಭೀತಿ ಹಾಗೂ ಲಾಕ್ ಡೌನ್ ವಿಸ್ತರಣೆ ಕಾರ್ಮಿಕರನ್ನು ಅವರ ಊರುಗಳಿಗೆ ತೆರಳುವಂತೆ ಮಾಡುತ್ತಿದ್ದು ಈ ಸಂದಿಗ್ಧ ಪರಿಸ್ಥಿತಿಯಲ್ಲಿ
ಅವರಿಗೆ ರಾಜ್ಯ ಸರ್ಕಾರಗಳು ಹೆಚ್ಚಿನ ನೆರವು ನೀಡಿ ಸ್ಪಂದಿಸಬೇಕು. ವಿಶೇಷ ಶ್ರಮಿಕ್ ರೈಲುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಓಡಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕೇಂದ್ರದೊಂದಿಗೆ ಸಮನ್ವಯವನ್ನು ಸಾಧಿಸಬೇಕೆಂದು ಕೇಂದ್ರವು ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದ್ದು, ಅದು ಮಾತ್ರವೇ ಅಲ್ಲದೇ ವಲಸೆ ಕಾರ್ಮಿಕರಿಗೆ ಸ್ಯಾನಿಟೈಸರ್ ಗಳು, ವಿಶ್ರಾಂತಿ ಸ್ಥಳಗಳಲ್ಲಿ ನೀರು ಮತ್ತು ಆಹಾರ ವನ್ನು ಒದಗಿಸಬೇಕೆಂದು ಸೂಚನೆ ನೀಡಲಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here