ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಕೊರೋನಾ ಪಾಸಿಟಿವ್ ದೃಢವಾಗಿದೆ. ಸಿದ್ದರಾಮಯ್ಯ ಅವರಿಗೆ ಕೊರೋನಾ ಪಾಸಿಟಿವ್ ಇರುವುದು ತಿಳಿಯುತ್ತಿದ್ದಂತೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಟೆಸ್ಟ್‌ ಮಾಡಿಸಿದ್ದು ಪಾಸಿಟಿವ್‌ ಬಂದಿದೆ.ಈ ಬಗ್ಗೆ ಟ್ವೀಟ್‌ ಮಾಡಿರುವ ಪುತ್ರ ಯತೀಂದ್ರ, ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು.

ಕೊರೊನಾ ಆಂಟಿಜೆನ್‌ ಟೆಸ್ಟ್‌ ಮಾಡಲಾಗಿದ್ದು ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್‌ ಆಗಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.ರಾತ್ರಿ 11:30ಕ್ಕೆ ಮಣಿಪಾಲ್ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ಮಗ ಡಾ.ಯತೀಂದ್ರ ಅವರು ಸಿದ್ದರಾಮಯ್ಯನವರನ್ನು ಈಗ ನೋಡಿಕೊಳ್ಳುತ್ತಿದ್ದಾರೆ.ಕೊರೊನಾ ಬಂದಿರುವ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ.

ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here