ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೋವಿಡ್-19 ಪಾಸಿಟಿವ್ ಆದ ಕಾರಣ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯು ತನ್ನ ಹೆಲ್ತ್ ಬುಲೆಟಿನ್ ನಲ್ಲಿ ಸಿದ್ಧರಾಮಯ್ಯನವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದೆ. ಸಿದ್ದರಾಮಯ್ಯನವರ ಆರೋಗ್ಯ ಸ್ಥಿರವಾಗಿದೆ. ಜ್ವರ ಇದ್ದ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದ್ದು, ನಡೆಸಿರುವ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ವೇಳೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆಯೆಂದು ತಿಳಿಸಿದ್ದು, ವೈದ್ಯರ ತಂಡವೊಂದು ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿದೆಯೆಂದು ಆಸ್ಪತ್ರೆ ಮಾಹಿತಿ ನೀಡಿದೆ.

ಅವರ ಪುತ್ರ ಯತೀಂದ್ರ ಈ ಬಗ್ಗೆ ಟ್ವೀಟ್ ಮಾಡಿದ್ದು,
ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು, ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆಂಟಿಜೆನ್ ಟೆಸ್ಟ್ ಮಾಡಲಾಗಿದ್ದು, ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ ಆಗಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ. ಸಿದ್ಧರಾಮಯ್ಯನವರು ನಿನ್ನೆ ರಾತ್ರಿ 11:30 ಕ್ಕೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಪುತ್ರ ಕೂಡಾ ಆಸ್ಪತ್ರೆಯಲ್ಲಿ ತಂದೆಯ ಕಾಳಜಿ ವಹಿಸಿದ್ದಾರೆ ಎನ್ನಲಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here