ಕಳೆದ ಮೂರು ತಿಂಗಳ ಹಿಂದೆ ರಚನೆಯಾದ ಕರ್ನಾಟಕದ ಸಮ್ಮಿಶ್ರ ಸರ್ಕಾರ ಈಗ ನೂರು ದಿನಗಳನ್ನು ಪೂರೈಸಿದೆ. ಆದರೆ ಸಮ್ಮಿಶ್ರ ಸರ್ಕಾರ ರಚನೆ ಆದ ಕ್ಷಣದಿಂದ ಸಮ್ಮಿಶ್ರ ಸರ್ಕಾರದಲ್ಲಿ ಒಂದಲ್ಲ ಒಂದು ಬೆಳವಣಿಗೆಗಳು ಸಮ್ಮಿಶ್ರ ಸರ್ಕಾರದ ಹಾದಿಯನ್ನು ಕಠಿಣ ದಾರಿಗೆ ಕರೆದೊಯ್ಯುತ್ತಲೇ ಇವೆ. ಆರಂಭದಲ್ಲಿ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ ಅಧಿವೇಶನ ಸಮಯದಲ್ಲ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅವರ ನಡುವಿನ ಅಸಮಧಾನ ಸ್ಪೋಟಗೊಂಡಿತ್ತು. ನಂತರ  ಧರ್ಮಸ್ಥಳದ ಪೃಕೃತಿ ಚಿಕಿತ್ಸಾಲಯದಲ್ಲಿ ಸಹ ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ಸರ್ಕಸರದ ಬಗ್ಗೆ ಸರ್ಕಾರ ಎಷ್ಟು ದಿನ ಇರಬಲ್ಲದು ಎಂಬುದು ಹೇಳಲಾಗುವುದಿಲ್ಲ ಎಂದು ಹೇಳಿಕೆ

ನೀಡುವ ಮೂಲಕ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದರು. ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರಿಗೆ ಒಬ್ಬರೊನ್ನಬ್ಬರಿಗೆ ಕಂಡರೆ ಆಗಿಬರುವುದಿಲ್ಲ ಎಂಬುದು ನಾಡಿನ ಜನತೆಗೆ ಗೊತ್ತಿರುವ ವಿಷಯವಾದರೂ ಸಹ ಇಬ್ಬರೂ ಮಾಧ್ಯಮಗಳ ಮುಂದೆ ಮನಸ್ಥಾಪ ಮುಚ್ಚಿಡುವ ಪ್ರಯತ್ನ ಮಾಡುತ್ತಿದ್ದಾರೆ‌. ಇನ್ನು ಹೊಸ ವಿಷಯವೇನಪ್ಪ ಎಂದರೆ ಸಿದ್ದರಾಮಯ್ಯ ಅವರು ಕೆಲ ಶಾಸಕರ ಜೊತೆ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಈಗ ಸಿದ್ದರಾಮಯ್ಯ ಅವರ ಜೊತೆ ವಿದೇಶಕ್ಕೆ ಪ್ರವಾಸ ಮಾಡುತ್ತಿರುವ ಶಾಸಕರು ಸಿದ್ದರಾಮಯ್ಯ ಅವರ ಆಪ್ತರಾಗಿರುವುದು ಕೆಲ ಕಾಂಗ್ರೆಸ್ ಮುಖಂಡರು ಮತ್ತು ಜೆಡಿಎಸ್ ಮುಖಂಡರಿಗೆ ತಲೆ ನೋವಾಗಿ ಪರಿಣಮಿಸಿದೆ.

ಇಂದು ನವದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತನಾಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರ ಬಗ್ಗೆ ರಾಹುಲ್ ಗಾಂಧಿ ಬಳಿ‌ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರಕ್ಕೆ ರಾಜ್ಯದಲ್ಲಿ ಯಾವುದೇ ತೊಂದರೆ ಇಲ್ಲ ಅಕಸ್ಮಾತ್ ಸಮ್ಮಿಶ್ರ ಸರ್ಕಾರಕ್ಕೆ ತೊಂದರೆ ಬಂದರೆ ಅದು ಸಿದ್ದರಾಮಯ್ಯ ಅವರಿಂದ ಮಾತ್ರ ಬರುತ್ತದೆ.ಹೀಗಾಗಿ ನೀವು ಸಿದ್ದರಾಮಯ್ಯ ಅವರ ಮೇಲೆ ನಿಗಾ ವಹಿಸಬೇಕು ಎಂದು ರಾಹುಲ್ ಗಾಂಧಿ ಅವರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ ಎನ್ನಲಾಗುತ್ತಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here