ಅಧಿಕಾರ ಕಳೆದುಕೊಂಡ ನಂತರ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಅವರಿಗೆ ಹಾಗೂ ಸಿದ್ಧರಾಮಯ್ಯನವರಿಗೆ ಹುಚ್ಚರಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್.ಈಶ್ವರಪ್ಪನವರು. ದಾವಣಗೆರೆ ನಗರದಲ್ಲಿ ಮಾತನಾಡಿರುವ ಮಾನ್ಯ ಸಚಿವರುನಗರದಲ್ಲಿ ಮಾತನಾಡಿದ ಸಚಿವರು, ಎಚ್.ಡಿ.ಕುಮಾರಸ್ವಾಮಿ ಅವರನ್ನು ನಾನು ಒಂದು ವಿಷಯ ಕೇಳಲು ಬಯಸುತ್ತೇನೆ, ಅವರು ಸಿಎಂ ಆದಾಗ ನಾವು ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಮಾಡಿದ್ದೆವು. ನಿನ್ನೆಯವರೆಗೂ ಅವರು ಪರಿಹಾರ ಬಂದಿಲ್ಲ ಎಂದು ಆರೋಪ ಮಾಡುತ್ತಿದ್ದರು.

ಈಗ ಕೇಂದ್ರ ಸರ್ಕಾರವು ನೆರೆ ಪರಿಹಾರವನ್ನು ಘೋಷಣೆ ಮಾಡಿದೆ. ಆದರೆ ಅವರು ಇಷ್ಟೇನಾ ಎಂದು ಕೇಳುತ್ತಿರಾ ಎಂದು ಕಿಡಿಕಾರುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡುತ್ತಾ ಒಂದು ಕಡೆ ವಿಧಾನ ಸಭಾ ವಿರೋದ ಪಕ್ಷ ನಾಯಕ ಸ್ಥಾನಕ್ಕಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಯತ್ನ ಪಡುತ್ತಿದ್ದರೆ, ಮತ್ತೊಂದು ಕಡೆ ಸಿದ್ಧರಾಮಯ್ಯನವರು ಕೂಡಾ ವಿಪಕ್ಷ ನಾಯಕ ಸ್ಥಾನವನ್ನು ಪಡೆಯಲು ಮುಂದಾಗಿದ್ದಾರೆ. ಅದಕ್ಕೆ ಟೀಕೆ ಮಾಡಬೇಕು ಎಂದು ಮಾಡುತ್ತಿದ್ದಾರೆ.

ತಮಗೆ ವಿರೋಧ ಪಕ್ಷದ ನಾಯಕ ಸ್ಥಾನ ಸಿಗುವುದೋ ಇಲ್ಲವೋ ಎಂದು ವಿಲಿ ವಿಲಿ ಒದ್ದಾಡುತ್ತಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿಯ ಬಗ್ಗೆ ಮಾತನಾಡುತ್ತಿದ್ದಾರೆ. ಹೇಗಾದರೂ ಮಾಡಿ ಬಿಜೆಪಿ ಯನ್ನು ಟೀಕೆ ಮಾಡಬೇಕೆಂದು ಇದೆಲ್ಲಾ ಮಾಡುತ್ತಿದ್ದಾರೆ ಎಂದು ಟೀಕಿಸುತ್ತಾ ಅಯೋಧ್ಯೆ ವಿಷಯವಾಗಿ ತೀರ್ಪನ್ನು ನೀಡಲು ಸುಪ್ರೀಂಕೋರ್ಟ್ ಮುಂದಾಗಿದೆ. ಇಡೀ ದೇಶವೇ ಹೆಮ್ಮೆ ಪಡುವಂತಹ ತೀರ್ಪು ಬರಲಿದೆ ಎನ್ನುವ ವಿಶ್ವಾಸವಿದೆ. ಯಾರಿಗೂ ನೋವಾಗದ ರೀತಿ ತೀರ್ಪು ಬರಲಿದೆ ಎಂದು ಕೂಡಾ ಅವರು ಹೇಳಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here