ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಹೊಸದಾಗಿ ಪತ್ರವೊಂದನ್ನು ಬರೆದಿದ್ದಾರೆ. ಈ ಬಾರಿ ಸಿದ್ದರಾಮಯ್ಯ ಅವರು ಬರೆದಿರುವ ಪತ್ರ ಕುಮಾರಸ್ವಾಮಿ ಅವರಿಗೆ ಅಕ್ಷರಶಃ ಇಕ್ಕಟ್ಟಿಗೆ ಸಿಲುಕಿಸಬಹುದಾದ ವಿಷಯಗಳಿವೆ. ಕುಮಾರಸ್ವಾಮಿ ಅವರು ಈ ಬಾರಿಯ ಬಜೆಟ್ ಮಂಡಿಸಿದ ಸಮಯದಲ್ಲಿ ರಾಮನಗರದಲ್ಲಿ ಫಿಲ್ಮ್ ಸಿಟಿ ನಿರ್ಮಿಸಲು ಉದ್ದೇಶಿಸಿರುವುದಾಗಿ ತಿಳಿಸಿದ್ದರು. ಆದರೆ ಈ ವಿಷಯ ಸಿದ್ದರಾಮಯ್ಯ ಅವರಿಗೆ ಇರಿಸುಮುರಿಸು ತಂದಿದೆ. ಅದಕ್ಕಾಗಿ ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು ಮಾನ್ಯ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಈ ರೀತಿಯಾಗಿ

ಬರೆದಿದ್ದಾರೆನಮ್ಮ ಸರ್ಕಾರದ ಸಮಯದಲ್ಲಿ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಯಾಕೆಂದರೆ ಮೈಸೂರು ಫಿಲ್ಮ್ ಸಿಟಿ ನಿರ್ಮಿಸಲು ಅತ್ಯುತ್ತಮ ಸ್ಥಳ.ಮೈಸೂರಿನ ಹಲವಾರು ಅರಮನೆಗಳು ,ಕೆರೆಗಳು , ಬೆಟ್ಟ ಗುಡ್ಡ ಗಳು‌,ನದಿಗಳು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ ಹೀಗಾಗಿ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಿಸಲು ಜಾಗವನ್ನು ಸಹ ಮಜೂರು ಮಾಡಲಾಗಿತ್ತು ಇವೆಲ್ಲಕ್ಕಿಂತ ಮಿಗಿಲಾಗಿ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಿಸುವುದು ಕನ್ನಡಿಗರ ಆರಾಧ್ಯದೈವ ವರನಟ ಡಾ.ರಾಜ್‍ಕುಮಾರ್ ಅವರ ಕನಸಾಗಿತ್ತು ಹೀಗಾಗಿ

ನಾವು ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣ ಮಾಡಲು ಸಿದ್ದತೆ ನಡೆಸಿದ್ದವು. ಆದರೆ ಬದಲಾದ ಸರ್ಕಾರದಲ್ಲಿ ಈ ಬಾರಿಯ ಬಜೆಟ್ ನಲ್ಲಿ ನೀವು ರಾಮನಗರದಲ್ಲಿ ಚಿತ್ರನಗರಿ ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದ್ದೀರಿ.ಆದರೆ ಇದು ನಮಗೆ ಸಹಜವಾಗಿ ಬೇಜಾರು ಉಂಟು ಮಾಡಿದೆ. ದಯವಿಟ್ಟು ಈ ಮನವಿಯನ್ನು ಪುರಸ್ಕರಿಸಿ ಚಿತ್ರನಗರಿಯನ್ನು ಮೈಸೂರಿಗೆ ಸ್ಥಳಾಂತರಿಸಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಪತ್ರದಲ್ಲಿ ಕೇಳಿಕೊಂಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here