ಪ್ರಧಾನಿ ಮೋದಿಯವರ ಆಡಳಿತವನ್ನು ಹಿಟ್ಟರ್ ಆಡಳಿತಕ್ಕೆ ಹೋಲಿಕೆ ಮಾಡಿ ಟೀಕೆ ಮಾಡಿದ್ದಾರೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು. ಮೋದಿಯವರದು ಪ್ಯಾಸಿಸಂ ಸಿದ್ಧಾಂತ ಮತ್ತು ಅವರು ಹಿಟ್ಲರ್ ಆಡಳಿತ ಎಂದು ಸಿದ್ಧರಾಮಯ್ಯನವರು ಆರೋಪವನ್ನು ಮಾಡಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿರುವ ಸಿದ್ಧರಾಮಯ್ಯನವರು ಮೋದಿ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದಾರೆ. ಮೋದಿ ವಿರುದ್ಧ ಯಾರು ಮಾತನಾಡಬಾರದು. ಅಂತಹ ಪರಿಸ್ಥಿತಿ ಇದೆ ಎಂದು ಅವರು ಟೀಕಿಸಿದ್ದಾರೆ.

ನೆರೆ ಪರಿಹಾರಕ್ಕಾಗಿ ನಾವು ತಾತ್ಕಾಲಿಕ ಪರಿಹಾರವಾಗಿ ಕನಿಷ್ಠ 5 ಸಾವಿರ ಕೋಟಿಗಳನ್ನು ನೀಡಬೇಕೆಂದು ಮನವಿಯನ್ನು ಮಾಡಿದ್ದೆವು. ಆದರೆ ಎರಡು ತಿಂಗಳ ನಂತರ 1200 ಕೋಟಿಯನ್ನು ನೀಡಿದ್ದಾರೆ ಎಂದು ಸಿದ್ಧರಾಮಯ್ಯನವರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ರಾಜ್ಯದಲ್ಲಿ ಹಲವು ಜಿಲ್ಲೆಗಳು ಪ್ರವಾಹದಿಂದ ನಲುಗಿದ್ದು, ಬಿಜೆಪಿ ಸಂಸದರು ಪರಿಹಾರ ತರುವುದಕ್ಕೆ ವಿಫಲವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಲವೆಡೆ ಪ್ರತಿಭಟನೆಗಳನ್ನು ಈಗಾಗಲೇ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಿದ್ಧರಾಮಯ್ಯನವರು ನೆರೆ ಪರಿಹಾರ ನಿರೀಕ್ಷಿತ ಮಟ್ಟಕ್ಕೆ ಇಲ್ಲ ಎಂದು ಅಸಮಾಧಾನ ಪಟ್ಟಿದ್ದಾರೆ. ಇನ್ನು ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೆರೆ ಪರಿಹಾರವನ್ನು ಸಕಾಲಕ್ಕೆ ತರುವಲ್ಲಿ ವಿಫಲವಾದ ಬಿಜೆಪಿ ಸಂಸದರ ವಿರುದ್ಧ ವಿಭಿನ್ನವಾದ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸಂಸದರಿಗೆ ಬಳೆ ಹಾಗೂ ಕುಂಕುಮವನ್ನು ಕಳುಹಿಸಿಕೊಡುವ ಮೂಲಕ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here