ಕೊರೊನಾ ಸೋಂಕಿನ ಕಾರಣದಿಂದಾಗಿ ಮಾಜಿ ಸಿಎಂ ಸಿದ್ಧರಾಮಯ್ಯನವರು ಮಣಿಪಾಲ್ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿರುವ ವಿಷಯ ಈಗಾಗಲೇ ಎಲ್ಲರಿಗೂ ತಿಳಿದೇ ಇದೆ. ಮಾಜಿ ಸಿಎಂ ಅವರ ವಿರುದ್ಧ ಫೇಸ್‍ಬುಕ್‍ನಲ್ಲಿ ಕೆಲವರು ಅವಹೇಳನ ಕಾರಿಯಾಗಿ ಬರೆದಿದ್ದು, ಆ ಕಿಡಿಗೇಡಿಗಳ ವಿರುದ್ಧ ಕೆಪಿಸಿಸಿ ಕಾನೂನು ಘಟಕದಿಂದ ನಗರ ಪೊಲೀಸರಿಗೆ ದೂರು ನೀಡಲಾಗಿದೆ ಎನ್ನಲಾಗಿದೆ. ಸಿದ್ಧರಾಮಯ್ಯ ನವರ ಕುರಿತಾಗಿ ಫೇಸ್ ಬುಕ್ ನಲ್ಲಿ ಇಬ್ಬರು ಅವಹೇಳನಕಾರಿಯಾಗಿ ಬರೆದಿದ್ದು, ಆ ಇಬ್ಬರ ಮೇಲೆ ಕಾನೂನಿನ ಮೂಲಕ ಕ್ರಮ ಜರುಗಿಸಲು ಮುಂದಾಗಿದೆ ಕೆಪಿಸಿಸಿ.

ಕೆಪಿಸಿಸಿ ಯ ಕಾನೂನು ಘಟಕದ ಪರವಾಗಿ, ವಕೀಲರಾಗಿರುವ ಸೂರ್ಯ ಮುಕುಂದರಾಜ್ ಎನ್ನುವವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಫೇಸ್ ಬುಕ್ ನಲ್ಲಿ ಮತ್ತೆ ಹುಟ್ಟಿ ಬರಬೇಡ, ಬಂದರೂ ಜಾತಿ ಮಾಡಬೇಡ ಮಾಂಸ ತಿಂದು ದೇವಸ್ಥಾನಕ್ಕೆ ಹೋಗೊ ನಾಲಾಯಕ್, ಮೊಟ್ಟೇಲಿ ಮಕ್ಕಳ ಜಾತಿ ಭೇದ ಮಾಡೊ ಭಿಕಾರಿ ಹೋಗು ಎಂದೆಲ್ಲಾ ಅವಹೇಳನಕಾರಿ ಪೋಸ್ಟ್ ಗಳನ್ನು ಹಾಕಿರುವ ಮಂಜು ಮತ್ತು ಆನಂದ್ ಕುಮಾರ್ ಎನ್ನುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ಮಾಡಿದ್ದಾರೆ ಎನ್ನಲಾಗಿದೆ.

ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮಾಡುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸದಸ್ಯನನ್ನು ಪೋಲಿಸರು ಬಂಧನ ಮಾಡಿದ್ದು ನಾವಿಲ್ಲಿ ಸ್ಮರಿಸಬಹುದಾಗಿದೆ.‌

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here