ವಿಧಾನಸಭೆ ಚುನಾವಣೆಗೆ ಈಗಾಗಲೇ ಎಲ್ಲೆಡೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.ರಣಾಂಗಣ ರಂಗೇರುತ್ತಿರುವ ಬೆನ್ನಲ್ಲೇ ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಮೂರು ಪಕ್ಷಗಳಲ್ಲಿ ನಿಗೂಢವಾಗಿಯೇ ಇವೆ‌.

ಕಾಂಗ್ರೆಸ್ ,ಬಿಜೆಪಿ ,ಮತ್ತು ಜೆಡಿಎಸ್ ಪಕ್ಷಗಳ ಪ್ರಮುಖ ನಾಯಕರುಗಳಾದ ಸಿದ್ದರಾಮಯ್ಯ ,ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ ಮತ್ತು ಕಾರ್ಯಕರ್ತರ ಒತ್ತಾಯ ಇದೆ

ಹಾಗಾಗಿ ಬಾದಾಮಿ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಮಾತನಾಡಿದ್ದಾರೆ‌.ಹಾಗೊಂದು ವೇಳೆ ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಿಂದ ಕಣಕ್ಕಿಳಿದರೆ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಡಲು ಬಿಜೆಪಿ ನಿರ್ಧರಿಸಿದೆ.

ಬಾದಾಮಿಯಿಂದ ಸಿದ್ದರಾಮಯ್ಯ ವಿರುದ್ಧ ಕಣಕ್ಕಿಳಿಯಲು ಶ್ರೀರಾಮುಲು ಅವರಿಗೆ ತಯಾರಾಗಲು ಅಮಿತ್ ಷಾ ಹೇಳಿದ್ದಾರೆ ಎನ್ಬಲಾಗಿದೆ. ಒಂದು ವೇಳೆ ಹೈಕಮಾಂಡ್ ನಿರ್ಧಾರ ಕೈಗೊಂಡರೆ ನಾನು ಸ್ಪರ್ಧಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ ನಾಮಪತ್ರ ಸಲ್ಲಿಸುವುದನ್ನೇ ಕಾಯುತ್ತಿರುವ ಬಿಜೆಪಿ ಏಪ್ರಿಲ್  23 ರಂದು ನಾಮಪತ್ರ ಸಲ್ಲಿಸಲು ಸಿದ್ಧವಾಗಿರುವಂತೆ ಶ್ರೀರಾಮುಲುಗೆ ಈಗಾಗಲೇ ಸೂಚನೆ ಹೋಗಿದೆ ಎನ್ನಲಾಗಿದೆ.ಒಂದು ವೇಳೆ ಈ ಇಬ್ಬರೂ ಬಾದಾಮಿಯಿಂದ ಕಣಕ್ಕಿಳಿದರೆ ಪ್ರಭಲ ಸ್ಪರ್ದೆ ಏರ್ಪಡಲಿದೆ.

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here