ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಮುನಿಸಿಕೊಂಡಿದ್ದಾರೆ ಎಂಬ ವರದಿಗಳು ಆಗಿದ್ದ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯ ಅವರು ಜಮೀರ್ ಅಹ್ಮದ್ ಖಾನ್ ಪರ ವಹಿಸಿ ಮಾತನಾಡಿದ್ದಾರೆ. ಜಮೀರ್ ಅಹ್ಮದ್ ಖಾನ್ ಅವರನ್ನು ಹೊಗಳುವ ಭರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಬಿಜೆಪಿ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು ಜಮೀರ್ ಅಹ್ಮದ್ ಖಾನ್ ಬೆಂಬಲಕ್ಕೆ ನಿಂತಿದ್ದಾರೆ.

“ಕ್ವಾರೆಂಟೈನ್ ಮಾಡಲೇಬೇಕೆಂದೇ ಕ್ವಾರೆಂಟೈನ್‌ಗೆ ಒಳಪಡಿಸುವುದಲ್ಲ, ಕೊರೊನಾ ಸೋಂಕಿತರೊಂದಿಗೆ ಸಂಪರ್ಕ ಇದ್ದವರು, ರೋಗ ಲಕ್ಷಣ ಕಂಡುಬಂದವರನ್ನು ಕ್ವಾರೆಂಟೈನ್ ಮಾಡಬೇಕು. ಇಂತಹ ಸಂದಿಗ್ದ ಸಂದರ್ಭದಲ್ಲೂ ಶಾಸಕ ಜಮೀರ್ ಅಹ್ಮದ್ ಅವರ ಮೇಲೆ ಬಿಜೆಪಿ ನಾಯಕರು ದ್ವೇಷ ರಾಜಕಾರಣ ಮಾಡುತ್ತಿರುವುದು ನಾಚಿಕೆಗೇಡು.

ಸ್ಯಾನಿಟೈಸರ್ ತಯಾರಿಸಲು ಹಲವು ಮಾರ್ಗಗಳಿವೆ, ಅವೆಲ್ಲವನ್ನು ಬಿಟ್ಟು ಅಕ್ಕಿಯಿಂದ ಸ್ಯಾನಿಟೈಸರ್ ತಯಾರಿಸುತ್ತೇವೆ ಎಂದು ಹೊರಟಿರುವುದು ಮತಿಗೇಡಿ ಕೆಲಸ. ಬಡ ಜನರು ಅನ್ನಕ್ಕಾಗಿ ಪರದಾಡುತ್ತಿದ್ದಾರೆ, ಸರ್ಕಾರದ ಬಳಿ ಅಕ್ಕಿ ಸಂಗ್ರಹ ಜಾಸ್ತಿಯಿದ್ದರೆ ಬಡವರಿಗೆ ಹಂಚಿ” ಎಂದು ಸಿದ್ದರಾಮಯ್ಯ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ……

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here