ಕಳೆದ ರಾತ್ರಿ ಕಾವಲಭೈರಸಂದ್ರದಲ್ಲಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ. ಹಿಂದೂ-ಮುಸ್ಲಿಮ್ ಎರಡು ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಕೈಮುಗಿದು ಮನವಿ ಮಾಡುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗಲಭೆಗೆ ಪ್ರಚೋದಿಸಿದ್ದ ಮತ್ತು ಹಿಂಸಾಚಾರದ ಮೂಲಕ ಪ್ರತಿಕ್ರಿಯಿಸಿದ್ದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ
ಬೆಂಗಳೂರು ಪೊಲೀಸ್ ಕಮಿಷನರ್‌ಗೆ ತಿಳಿಸಿದ್ದೇನೆ. ಶಾಂತಿ ಸ್ಥಾಪನೆಯ ರಾಜ್ಯ ಸರ್ಕಾರದ ಪ್ರಯತ್ನಕ್ಕೆ
ನಮ್ಮ ಪಕ್ಷದ ಸಂಪೂರ್ಣ ಸಹಕಾರ ಇದೆ. ಇಂತಹ ಕೋಮು ಗಲಭೆಗಳಲ್ಲಿ‌ ಸಾವು-ನೋವಿಗೆ ಈಡಾಗುವವರು ಅಮಾಯಕರು ಎಂಬ ಸತ್ಯವನ್ನು ಅನುಭವದ ಪಾಠ ನಮಗೆ ಹೇಳಿಕೊಟ್ಟಿದೆ. ಮೊದಲು ಎರಡೂ ಧರ್ಮಗಳ ಹಿರಿಯರು ಒಂದೆಡೆ ಕೂತು ಪರಸ್ಪರ ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ಪ್ರಯತ್ನ ನಡೆಸಬೇಕೆಂದು ಕೋರುತ್ತೇನೆ.

ಪೊಲೀಸ್ ಠಾಣೆಯ ಮೇಲೆ ನಡೆದ ದಾಳಿ ಖಂಡನೀಯ. ಇದರಿಂದ ಪೊಲೀಸರು ನೈತಿಕ ಸ್ಥೈರ್ಯ‌ ಕಳೆದು ಕೊಳ್ಳಬಾರದು. ಇಂತಹ ಪ್ರಕರಣಗಳ ಸಂದರ್ಭಗಳಲ್ಲಿ ಪೊಲೀಸರು ತಕ್ಷಣ ವಿವೇಚನೆಯಿಂದ ನಿರ್ಧಾರ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು.
ಸಣ್ಣ ನಿರ್ಲಕ್ಷ್ಯ ಅನಾಹುತಕ್ಕೆ ದಾರಿಮಾಡಿಕೊಡುತ್ತದೆ.ಕಾವಲಭೈರಸಂದ್ರದಲ್ಲಿ ಗಲಭೆಯ ವರದಿ ಮಾಡಲು ಹೋಗಿರುವ ಮಾಧ್ಯಮ ಮಿತ್ರರ ಮೇಲೆ ದುಷ್ಕರ್ಮಿಗಳು ನಡೆಸಿರುವ ಹಲ್ಲೆ ಖಂಡನೀಯ.ಪೊಲೀಸರು ತಕ್ಷಣ ಆರೋಪಿಗಳನ್ನು ಬಂಧಿಸಿ, ಪತ್ರಕರ್ತರು ನಿರ್ಭೀತಿಯಿಂದ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here