ರಾಜ್ಯದಲ್ಲಿ ಕೊರೊನಾ ಸೋಂಕಿನ ಮಟ್ಟ ಹೆಚ್ಚುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಕಂಟೈನ್ಮೆಂಟ್ ವಲಯಗಳ ಸಂಖ್ಯೆ ಕೂಡಾ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಲವರು ಮತ್ತೆ ಲಾಕ್ ಡೌನ್ ಬೇಕು ಎಂದು ಹೇಳುತ್ತಿದ್ದಾರೆ. ಆದರೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಮಾತ್ರ ಯಾವುದೇ ಕಾರಣಕ್ಕೂ ಲಾಕ್ ಡೌನ್ ಇರುವುದಿಲ್ಲವೆಂದಿದ್ದರು. ಸಚಿವರಾದ ಆರ್.ಅಶೋಕ್ ಅವರು ಕೂಡಾ ಅದನ್ನು ಸ್ಪಷ್ಟೀಕರಿಸಿದ್ದರು. ಆದರೆ ಈ ವಿಷಯದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯನವರು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿ ಸಿಟ್ಟು ವ್ಯಕ್ತಪಡಿಸಿದ್ದಾರೆ.

ಅವರು ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಈಗ ರಾಜ್ಯಾದ್ಯಂತ ಲಾಕ್​ಡೌನ್ ಆಗಬೇಕಿದೆ ಎಂದು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ. ಸಿದ್ಧರಾಮಯ್ಯನವರು ತಮ್ಮ ಟ್ವೀಟ್ ನಲ್ಲಿ, ಪೂರ್ವಸಿದ್ಧತೆ ಇಲ್ಲದೆ ಪ್ರಾರಂಭದಲ್ಲಿ ಲಾಕ್‌ಡೌನ್ ಘೋಷಿಸಿದ್ದರಿಂದ ಜನರ ಆರೋಗ್ಯ ಮತ್ತು ರಾಜ್ಯದ ಆರ್ಥಿಕತೆ ಎರಡೂ ಹಾಳಾಯ್ತು. ಈಗ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವಾಗ ಲಾಕ್‌ಡೌನ್ ಆಗಬೇಕಾಗಿದೆ ಎಂದಿದ್ದಾರೆ. ಅಲ್ಲದೇ #LockdownFailed ಎಂಬ ಹ್ಯಾಷ್​ಟ್ಯಾಗ್ ಬಳಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇನ್ನು ಕಳೆದ ಕೆಲವೇ ದಿನಗಳ ಹಿಂದೆಯಷ್ಟೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕೂಡಾ ಇದೇ ವಿಷಯವನ್ನು ಹೇಳುತ್ತಾ ಬೆಂಗಳೂರಿಗೆ ಲಾಕ್ ಡೌನ್ ಅತ್ಯಾವಶ್ಯಕ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಇನ್ನೂ ಕೆಲವು ಕಡೆಗಳಲ್ಲಿ ಸ್ವಯಂ ಲಾಕ್ ಡೌನ್ ಕೂಡಾ‌ ಮಾಡಲು ಜನರು ಮುಂದಾದ ಘಟನೆಗಳು ನಡೆದಿವೆ ಎಂಬುದು ಕೂಡಾ ಗಮನಾರ್ಹ ವಿಷಯವಾಗಿದೆ.

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here