ಪ್ರಾಥಮಿಕ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲೇ ಆಗಬೇಕು, ಈ ದಿಸೆಯಲ್ಲಿ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು’ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.
ಇಲ್ಲಿಯ ಗುಲಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ಶುಕ್ರವಾರ ರಾತ್ರಿ ಮುಕ್ತಾಯಗೊಂಡ ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
‘ಶಿಕ್ಷಣದ ಮಾಧ್ಯಮದ ಆಯ್ಕೆಯನ್ನು ಪೋಷಕರಿಗೇ ಬಿಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದಾಗ ಮುಖ್ಯಮಂತ್ರಿಯಾಗಿದ್ದ ನಾನು ಎಲ್ಲ ಸಾಹಿತಿಗಳೊಂದಿಗೆ ಸಭೆ ನಡೆಸಿ ಅಭಿಪ್ರಾಯ ಪಡೆದು, ಸಂವಿಧಾನ ತಿದ್ದುಪಡಿ ಮಾಡುವಂತೆ ಪ್ರಧಾನಿಗೆ ಪತ್ರ ಬರೆದು ಒತ್ತಾಯಿಸಿದೆ, ಅಲ್ಲದೇ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೂ ಪತ್ರ ಬರೆದು ಒತ್ತಡ ತರುವ ಕೆಲಸ ಮಾಡಿದೆ, ಆದರೆ ಪ್ರಧಾನ ಮಂತ್ರಿಗಳಿಂದ ಈವರೆಗೂ ಸ್ಪಂದನೆ ಸಿಕ್ಕಿಲ್ಲ. ಇನ್ನಾದರೂ ರಾಜ್ಯ ಸರಕಾರ ಕೇಂದ್ರದ ಮೇಲೆ ಒತ್ತಡ ತರಬೇಕು, ಬೇರೆ ರಾಜ್ಯಗಳಿಂದಲೂ ಒತ್ತಡ ತರುವ ಕೆಲಸ ಮಾಡಬೇಕು’ ಎಂದರು.
ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ನೀಡುವ ವಿಚಾರ ದೇಶಾದ್ಯಂತ ಚರ್ಚೆಗೊಳಪಟ್ಟು ಕೇಂದ್ರ ಸರಕಾರಕ್ಕೆ ಬಿಸಿ ಮುಟ್ಟಿಸುವಂತಾಗಬೇಕು ಎಂದರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here