ಇಂದು ಸುದ್ದಿಗೋಷ್ಟಿ ಕರೆದು 14 ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ರಮೇಶ್ ಕುಮಾರ್ ಅವರ ಆದೇಶವನ್ನು ಸಿದ್ದರಾಮಯ್ಯನವರು ಸ್ವಾಗತಿಸಿದ್ದಾರೆ.ಸಿದ್ದರಾಮಯ್ಯ ಈ ಬಗ್ಗೆ ಟ್ವಿಟ್ಟರ್ನಲ್ಲಿ ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಪದವಿ, ಅಧಿಕಾರ ರಾಜಕಾರಣದಲ್ಲಿ ಎಂದಿಗೂ ಶಾಶ್ವತವಲ್ಲ. ಮುಂದಿನ ಪೀಳಿಗೆಯ ರಾಜಕಾರಣಕ್ಕೆ ನಾವು ಮಾದರಿಯಾಗಿ ಏನನ್ನು ಬಿಟ್ಟುಹೋಗುತ್ತೇವೆ ಎಂಬುದು ಮುಖ್ಯ. ಸಭಾಧ್ಯಕ್ಷರ ಇಂದಿನ‌ ನಿರ್ಣಯ ಅವಕಾಶವಾದಿ ರಾಜಕಾರಣಕ್ಕೆ ನೀಡಿರುವ ಕೊಡಲಿ ಏಟು. ಅವರ ಈ ತೀರ್ಮಾನವನ್ನು ನಾನು ಸ್ವಾಗತಿಸುತ್ತೇನೆ.

ಮಾನ್ಯ ಸಭಾಧ್ಯಕ್ಷರು ಎಲ್ಲ 14 ಶಾಸಕರನ್ನು ಪಕ್ಷ ವಿರೋಧಿ ಚಟುವಟಿಕೆಯಡಿ ಅನರ್ಹಗೊಳಿಸಿ ಹೊರಡಿಸಿರುವ ಆದೇಶ ಪ್ರಜಾಪ್ರಭುತ್ವಕ್ಕೆ ಸಂದ ನೈಜ ಗೆಲುವು. ಸ್ವಾರ್ಥ ಸಾಧನೆ, ಅಧಿಕಾರದಾಸೆಯಿಂದ ಜನಾದೇಶವನ್ನು ಧಿಕ್ಕರಿಸಿ ತಮ್ಮನ್ನು ತಾವು ಮಾರಿಕೊಳ್ಳುವ ಹೀನ ಸಂಸ್ಕೃತಿಗೆ ಈ ತೀರ್ಪು ಇತಿಶ್ರೀ ಹಾಡಲಿದೆ ಎಂಬುದು ನನ್ನ ನಂಬಿಕೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವಿಟ್ಟರ್ ಮೂಲಕ ಬರೆದಿದ್ದಾರೆ.

Karnataka Speaker KR Ramesh Kumar: 14 MLAs(rebel Congress-JDS MLAs) have been disqualified.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here