ಮಾಜಿ ಸಿಎಂ, ರಾಜ್ಯ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಅವರಿಗೆ ವಿಪಕ್ಷ ನಾಯಕನ ಸ್ಥಾನವನ್ನು ನೀಡಬಾರದೆಂದು ಕಾಂಗ್ರೆಸ್​​​ ಮುಖಂಡರು ತೀವ್ರ ವಿರೋಧವನ್ನು ವ್ಯಕ್ತ ಪಡಿಸಿದ್ದಾರೆ ಎನ್ನಲಾಗಿದೆ. ವಿಪಕ್ಷ ನಾಯಕನ ಆಯ್ಕೆಯ ವಿಚಾರದಲ್ಲಿ ಖಾಸಗಿ ಹೊಟೇಲೊಂದರಲ್ಲಿ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಅವರು ಸಭೆಯನ್ನು ನಡೆಸಿದ್ದು, ಇದರಲ್ಲಿ ಬಿ.ಕೆ. ಹರಿ ಪ್ರಸಾದ್ ಮತ್ತು ಹೆಚ್‌.ಕೆ. ಮುನಿಯಪ್ಪ ಇಬ್ಬರೂ ಕೂಡಾ ಸಿದ್ಧರಾಮಯ್ಯನವರಿಗೆ ವಿಪಕ್ಷ ನಾಯಕನ ಸ್ಥಾನ ನೀಡಬಾರದೆಂದು ವಿರೋಧವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಿದ್ಧರಾಮಯ್ಯನವರ ಸರ್ವಾಧಿಕಾರ ಧೋರಣೆಗೆ ಒಂದು ತಡೆಯನ್ನು ಹಾಕಬೇಕಿದ್ದು, ಅದಾಗದಿದ್ದರೆ ಮುಂದಿನ ದಿನಗಳಲ್ಲಿ ಪಕ್ಷವು ಇನ್ನಷ್ಟು ಸಂಕಷ್ಟಕ್ಕೆ ಗುರಿಯಾಗುವ ಸಾಧ್ಯತೆಗಳು ಇದೆ ಎಂದು, ಅಂತಹ ಪರಿಸ್ಥಿತಿ ಎದುರಾಗದೇ ಇರಬೇಕೆಂದರೆ ವಿಪಕ್ಷ ನಾಯಕನ ಸ್ಥಾನವನ್ನು ಬೇರೆಯವರಿಗೆ ನೀಡಿ ಎಂಬ ಬೇಡಿಕೆಯನ್ನು ಇಡುವ ಮೂಲಕ ಸಿದ್ಧರಾಮಯ್ಯನವರ ವಿರುದ್ಧ ಕಾಂಗ್ರೆಸ್ ನಾಯಕರು ತಮ್ಮ ಆಗ್ರಹವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವರ ಮುಂದೆ ಇಟ್ಟಿದ್ದಾರೆನ್ನಲಾಗಿದೆ.

ಇವರು ಮಾತ್ರವಲ್ಲದೆ ಕೆ.ಬಿ ಕೋಳಿವಾಡ ಕೂಡ ಸಿದ್ದರಾಮಯ್ಯ ಅವರಿಗೆ ವಿಪಕ್ಷ ಸ್ಥಾನ ನೀಡದಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರಂತೆ. ಇನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಯವರಯ, ಅಸಮಾಧಾನ ಹೊರಹಾಕಿರುವ ಕಾಂಗ್ರೆಸ್ ನಾಯಕರ ಅಭಿಪ್ರಾಯವನ್ನಯ ಹೈಕಮಾಂಡ್​​​ಗೆ ತಲುಪಿಸುವುದಾಗಿ ಭರವಸೆ ನೀಡಿದ್ದಾರೆನ್ನಲಾಗಿದೆ. ಅಲ್ಲದೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಕೂಡಾ ಪ್ರತಿಯೊಬ್ಬರೊಂದಿಗೂ ಚರ್ಚೆ ನಡೆಸುವುದಾಗಿ ಕೂಡಾ ಅವರು ಹೇಳಿದ್ದಾರೆ ಎನ್ನಲಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here