ಕಳೆದ ಮೂರು ದಿನಗಳ ಹಿಂದೆ ನೆರೆಯ ಆಂಧ್ರಪ್ರದೇಶದಲ್ಲಿ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾದ ಜಗನ್ಮೋಹನ್ ರೆಡ್ಡಿ ಅವರು ಸುಮಾರು 200 ಕೋಟಿ ರು ವೆಚ್ಚದಲ್ಲಿ ಕೋವಿಡ್ ಸೋಂಕಿತರಿಗಾಗಿ  ಹಾಗೂ ಇತರ ರೋಗಿಗಳು ಅನುಕೂಲಕ್ಕಾಗಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಆಂಬುಲೆನ್ಸ್ ಗಳನ್ನು ಏಕಕಾಲದಲ್ಲಿ ಜನರಿಗೆ ಅನುಕೂಲ ಆಗಲು ಆಂಬುಲೆನ್ಸ್  ಸೇವೆಯನ್ನು ಒದಗಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ಇದೀಗ ಅದೇ ವಿಚಾರವನ್ನು ಇಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ

ರಾಜ್ಯ ಸರ್ಕಾರಕ್ಕೆ ಟ್ವೀಟ್ ಮೂಲಕ ಕಾಲೆಳೆದಿದ್ದಾರೆ. ಜಗಮೋಹನ್ ರೆಡ್ಡಿ ಅವರನ್ನು ಹೊಗಳುವ ಹಾಗೆ  ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊನೆಯಲ್ಲಿ ಜಗಮೋಹನ್ ರೆಡ್ಡಿ ಅವರನ್ನು ನೋಡಿ ನೀವು ಕಲಿತುಕೊಳ್ಳಿ ಎಂದು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಟಾಂಗ್ ನೀಡಿದ್ದಾರೆ. “ಸಿದ್ದರಾಮಯ್ಯ ಮಾಡಿರುವ ಟ್ವೀಟ್ ಹೀಗಿದೆ.

ಆಂಧ್ರಪ್ರದೇಶದಲ್ಲಿ ಅಲ್ಟ್ರಾ‌ ಮಾಡರ್ನ್ ವೈದ್ಯಕೀಯ ಸಲಕರಣೆಗಳಿಂದ ಸಜ್ಜುಗೊಂಡಿರುವ 1000 ಕ್ಕೂ ಹೆಚ್ಚು ಅಂಬ್ಯುಲೆನ್ಸ್‌‌ ಸೇವೆಯನ್ನು ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ 200 ಕೋಟಿ ರೂ.ವೆಚ್ಚದಲ್ಲಿ ಪ್ರಾರಂಭಿಸಿದ್ದಾರೆ.ನಮ್ಮಲ್ಲಿ ಅಂಬ್ಯುಲೆನ್ಸ್ ಇಲ್ಲದೆ ಜ‌ನ ಬೀದಿಯಲ್ಲಿ ಸಾಯುತ್ತಿದ್ದಾರೆ.ಉಳಿದವರನ್ನು ನೋಡಿಯಾದರೂ ಕಲಿತುಕೊಳ್ಳಿ ” ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here