ರಾಜ್ಯ ಪಠ್ಯಕ್ರಮದಲ್ಲಿ ಪರಿಷ್ಕರಣೆಗಳನ್ನು ಮಾಡಿರುವ ರಾಜ್ಯ ಸರ್ಕಾರವು ಏಳನೇ ಮತ್ತು ಹತ್ತನೇ ತರಗತಿ ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್, ಸಂಗೊಳ್ಳಿ ರಾಯಣ್ಣ, ಅಬ್ಬಕ್ಕ ದೇವಿ ಮುಂತಾದವರ ಅಧ್ಯಾಯಗಳನ್ನು ಕೈ ಬಿಟ್ಟಿರುವ ವಿಚಾರ ಈಗಾಗಲೇ ಸಾಕಷ್ಟು ಸುದ್ದಿಯಾಗಿ ಚರ್ಚೆ ಮತ್ತು ವಿಮರ್ಶೆ ಗಳಿಗೆ ಕಾರಣವಾಗಿರುವಾಗಲೇ ಇದೇ ವಿಚಾರಕ್ಕೆ ಮಾಜಿ ಸಿಎಂ ಹಾಗೂ ರಾಜ್ಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತೀವ್ರವಾದ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಅವರು ಸರ್ಕಾರದ ಈ‌ ನಿರ್ಧಾರದ ವಿರುದ್ಧ ಸರಣಿ ಟ್ವೀಟ್ ಗಳನ್ನು ಮಾಡುವ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.‌

ಏಸು ಕ್ರಿಸ್ತ, ಪ್ರವಾದಿ ಪೈಗಂಬರ್, ಟಿಪ್ಪುಸುಲ್ತಾನ್, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕದೇವಿ ಮೊದಲಾದವರಿಗೆ ಸಂಬಂಧಿಸಿದ ಪಠ್ಯವನ್ನು ಹತ್ತನೇ ತರಗತಿಯ ಪಠ್ಯಕ್ರಮದಿಂದ ಕೈಬಿಟ್ಟಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ. ಅಧಿಕೃತ ಸರ್ಕಾರ‌ ದುರ್ಬಲಗೊಳ್ಳುತ್ತಿದೆ,‌ ಅನಧಿಕೃತ ಸಂಘಿ ಸರ್ಕಾರ ಬಲಗೊಳ್ಳುತ್ತಿದೆ. 10ನೇ ತರಗತಿ‌‌ ಪಠ್ಯದಿಂದ ಕೆಲವು ಮಹಾಪುರುಷರಿಗೆ ಸಂಬಂಧಿಸಿದ ಪಾಠವನ್ನು ಕೈಬಿಟ್ಟದ್ದರಲ್ಲಿ ಸರ್ಕಾರದ ಪಾತ್ರವಿಲ್ಲ ಎಂದು ಸಚಿವ ಶಿಕ್ಷಣ ಸಚಿವ ಸುರೇಶ್ ಅವರು ಹೇಳಿದ್ದಾರೆ.

 

ಕರ್ನಾಟಕ ಪಠ್ಯಪುಸ್ತಕ ಸಮಿತಿ ಸರ್ಕಾರಕ್ಕಿಂತಲೂ ಉನ್ನತ ಸಂಸ್ಥೆಯೇ? ಅದನ್ನು ತಕ್ಷಣ ವಾಪಸು ಪಡೆಯಿರಿ, ಇಲ್ಲದೆ ಇದ್ದರೆ ನಿಮ್ಮ ಪಾತ್ರ ಒಪ್ಪಿಕೊಳ್ಳಿ.
ಕೊರೊನಾ ನಿಯಂತ್ರಿಸಲಾಗದ ರಾಜ್ಯಸರ್ಕಾರ, ಪರಿಸ್ಥಿತಿಯ ದುರ್ಬಳಕೆ ಮಾಡಿಕೊಂಡು ಪಠ್ಯಪುಸ್ತಕಗಳನ್ನು ಕೇಸರೀಕರಣಗೊಳಿಸಿ
ಗುಪ್ತ ಅಜೆಂಡಾ ಅನುಷ್ಠಾನಗೊಳಿಸಲು ಹೊರಟಿದೆ.‌‌
ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡುವ ಈ ಹುನ್ನಾರವನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ, ಹೋರಾಟ ಅನಿವಾರ್ಯವಾಗಬಹುದು ಎಂದು ಅಸಮಾಧಾನ ಹೊರಹಾಕಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here