ಒಂದೆಡೆ ರಾಜ್ಯವು ಭೀಕರ ಪ್ರವಾಹದಿಂದ ನರಳುತ್ತಿದ್ದರೆ, ಮತ್ತೊಂದು ಕಡೆ ಅಲ್ಲಿನ ಜನರ ರಕ್ಷಣಾ ಕಾರ್ಯಗಳು ನಡೆಯುತ್ತಿವೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸರಣಿ ಟ್ವೀಟ್ ಗಳ ಮೂಲಕ ಮುಖ್ಯಮಂತ್ರಿಗಳು ಹಾಗೂ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ. ತಮ್ಮ ಟ್ವೀಟ್ ನಲ್ಲಿ ಅವರು ಯಡಿಯೂರಪ್ಪ ಅವರನ್ನು ಏಕಚಕ್ರಾಧಿಪತಿಯೆಂದು ಕರೆದು ವ್ಯಂಗ್ಯವಾಡಿದ್ದಾರೆ.
ಕೆಎಂಫ್ ಗೆ ಸಂಬಂಧಿಕರನ್ನು ನೇಮಿಸುವ ಬದಲು ಸಂಪುಟವನ್ನು ರಚನೆ ಮಾಡಿದ್ದರೆ ಪ್ರವಾಹ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಬಹುದಿತ್ತಲ್ಲವೇ ಏಕಚಕ್ರಾಧಿಪತಿಗಳೇ? ಎಂದು ಟೀಕೆ ಮಾಡಿದ್ದಾರೆ.

ಸಂಪುಟದ ಸದಸ್ಯರ ಅನುಮೋದನೆಗೆ ಸಮಯವಿಲ್ಲದ ನಿಮ್ಮ ಹೈಕಮಾಂಡ್ ಗೆ ಕೆಎಂಎಫ್ ಸದಸ್ಯರ ನೇಮಕಕ್ಕೆ ಆದ್ಯತೆ ನೀಡಲು ಹೇಳಿತ್ತೇ? ಎಂದು ಪ್ರಶ್ನೆ ಮಾಡಿದ್ದಾರೆ. ಮತ್ತೊಂದು ಟ್ವೀಟ್‍ನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೇಳಿಕೆಯನ್ನು ಪ್ರಸ್ತಾಪ ಮಾಡುತ್ತಾ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಕೂಡಾ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಜನ ಪ್ರವಾಹದಿಂದ ತತ್ತರಿಸುತ್ತಿರುವುದನ್ನು ರಾಜ್ಯದ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ತಿಳಿಸಿ ನೆರವಿಗೆ ಮೊರೆ ಇಡಬೇಕೆಂತೆ? ಇದು ನಿಮ್ಮ ಸನ್ಮಾನ್ಯ ಮೋದಿ ಅವರ ಸಬ್‍ಕ ಸತ್ ಸಬ್ ವಿಕಾಸ್ ಸರ್ಕಾರ ಎಂದು ಟೀಕೆ ಮಾಡಿದ್ದಾರೆ.

ಇನ್ನು ಜೋಶಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿ ರಾಜ್ಯ ಸರ್ಕಾರ ಪ್ರವಾಹದಿಂದ ತತ್ತರಿಸಿರುವ ಜಿಲ್ಲೆಗಳಲ್ಲಿ ಜನರ ರಕ್ಷಣೆಗೆ ಹಾಗೂ ಪರಿಹಾರ ಕಾರ್ಯ ಕೈಗೊಳ್ಳಲು ಯಾವ ರೀತಿಯ ನೆರವು ಬೇಕು ಎಂದು ತಿಳಿಸಿಲ್ಲ ಎಂದು ಹೇಳುತ್ತಾ, ಸರಣಿ ಟ್ವೀಟ್ ಗಳ ಮೂಲಕ ಅವರು ಮುಖ್ಯಮಂತ್ರಿ, ಹೈ ಕಮಾಂಡ್ ಹಾಗೂ ಸರ್ಕಾರದ ನಡೆಯನ್ನು ಟೀಕಿಸುತ್ತಿದ್ದಾರೆ..

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here