ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ನೆನ್ನೆಯಷ್ಟೇ  ಕೊರೋನಾ ಪಾಸಿಟಿವ್ ಇರುವುದು ವರದಿಯಾಗಿತ್ತು. ತಮಗೆ ಕೊರೋನಾ  ಇರುವುದು ಧೃಡವಾಗುತ್ತಿದ್ದಂತೆ  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಸಹ ಕೊರೋನಾ ಪಾಸಿಟಿವ್ ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ..

ಇಬ್ಬರೂ ಪ್ರಭಾವಿ ನಾಯಕರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಅವರ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ದೇವರಲ್ಲಿ ಗುಣಮುಖರಾಗಿ ಬರುವಂತೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇಂದು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ದೇವರಲ್ಲಿ ವಿಶೇಷ ಪೂಜೆ ಸಲ್ಲಿಸಿ ತಮ್ಮ ಪಕ್ಷದ ಹಿರಿಯ ನಾಯಕರಾದ ಸಿದ್ದರಾಮಯ್ಯ ಹಾಗೂ ರಾಜ್ಯದ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ.

ಗುಲ್ಬರ್ಗ ಗಾಣಿಗಾಪುರದ ದತ್ತಾತ್ರೇಯ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದೆ. ಈ ಸಂದರ್ಭದಲ್ಲಿ ಶಾಸಕರಾದ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವರಾದ ಶರಣಪ್ರಕಾಶ ಪಾಟೀಲ್, ಶಾಸಕರಾದ ಅಜಯ್ ಧರಂ ಸಿಂಗ್, ಎಂ.ವೈ. ಪಾಟೀಲ್, ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ್ ಮತ್ತಿತರರು ಜತೆಗಿದ್ದರು.

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here