ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭೆ ಕ್ಷೇತ್ರದ ಉಚಗಾಂವ್ ನ ಇತಿಹಾಸ ಪ್ರಸಿದ್ಧ ಶ್ರೀ ಮಳೆಕರ್ಣಿ ದೇವಾಲಯಕ್ಕೆ ಇಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್, ಚನ್ನರಾಜ್ ಹಾಜರಿದ್ದರು.