SP ಲೋಕ ಚುನಾವಣೆ: ಅಭ್ಯರ್ಥಿಗಳ ಘೋಷಿಸಿದೆ.! ಅದರಲ್ಲಿ
ಉತ್ತರ ಪ್ರದೇಶ: ಮುಂಬರುವ ಲೋಕಸಭಾ ಚುನಾವಣೆಗೆ ಸಮಾಜವಾದಿ ಪಕ್ಷವು ಇಂದು 16 ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದೆ.
ಇದರೊಂದಿಗೆ ಚುನಾವಣಾ ದಿನಾಂಕ ಘೋಷಣೆಯಾಗುವ ಮೊದಲೇ ಅಭ್ಯರ್ಥಿಗಳನ್ನು ಪ್ರಕಟಿಸಿದ ಮೊದಲ ಪಕ್ಷ ಎಂಬ ಖ್ಯಾತಿಗೆ ಎಸ್ಪಿ ಪಾತ್ರವಾಗಿದೆ.
ಮೈನ್ ಪುರಿ ಕ್ಷೇತ್ರದಿಂದ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಪತ್ನಿ ಡಿಂಪಲ್ ಯಾದವ್ ಅವರನ್ನು ಕಣಕ್ಕಿಳಿಸಲಾಗಿದೆ. ಡಿಂಪಲ್ 2022ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಭಾರೀ ಮತಗಳ ಅಂತರ ದಿಂದ ಮಣಿಸಿದ್ದರು.