ಭಾರತದ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಕೆಲವು ದಿನಗಳ ಹಿಂದೆ ಕೊರೊನಾ ಸೋಂಕಿನ ಲಕ್ಷಣಗಳು ಕಂಡ ಹಿನ್ನೆಲೆಯಲ್ಲಿ ಅವರು ಚೆನ್ನೈನ ಎಂಜಿಎಂ ಹೆಲ್ತ್ ಕೇರ್ ನಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು ಮತ್ತು ಅವರು ಆಗ ವೀಡಿಯೋ ಕೂಡಾ ಮಾಡಿ ನನ್ನ ಬಗ್ಗೆ ಚಿಂತೆ ಮಾಡಬೇಡಿ ಎಂದು ಜನರಿಗೆ ತಮ್ಮ ಆರೋಗ್ಯದ ಬಗ್ಗೆ ತಿಳಿಸಿದ್ದರು. ಆದರೆ ಇಂದು ಆಸ್ಪತ್ರೆಯು ತನ್ನ ಹೆಲ್ತ್ ಬುಲೆಟಿನ್ ನಲ್ಲಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದ ವಸ್ತುಸ್ಥಿತಿಯನ್ನು ವಿವರಿಸಿದ್ದು, ಎಸ್.ಪಿ.ಬಿ. ಅವರ ಆರೋಗ್ಯ ಪರಿಸ್ಥಿತಿ ತೀವ್ರವಾಗಿ ಗಂಭೀರವಾಗಿದೆ ಎಂದು ತಿಳಿಸಿದೆ.

ಆಸ್ಪತ್ರೆಯ ಬುಲೆಟಿನ್ ನಲ್ಲಿ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಆಗಸ್ಟ್ 5 ರಂದು ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಆಗಸ್ಟ್ 13 ರಂದು ಅವರ ಆರೋಗ್ಯದಲ್ಲಿ ಉಂಟಾದ ವ್ಯತ್ಯಾಸದಿಂದಾಗಿ ಅವರ ಪ್ರಸ್ತುತ ಪರಿಸ್ಥಿತಿ ಗಂಭೀರವಾಗಿದ್ದು, ಅವರನ್ನು ಐಸಿಯು ಗೆ ದಾಖಲು ಮಾಡಲಾಗಿದ್ದು, ಕ್ರಿಟಿಕಲ್ ಕಂಡೀಶನ್ ನಲ್ಲಿ ಇರುವ ಅವರನ್ನು ನಮ್ಮ‌ ಪರಿಣಿತ ವೈದ್ಯರ ತಂಡ ಸೂಕ್ತವಾಗಿ ಗಮನಿಸಿ ಚಿಕಿತ್ಸೆಯನ್ನು ನೀಡುತ್ತಿದೆ ಎಂದು ಹೇಳಿದೆ. ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಟೀಂ ವಹಿಸುತ್ತಿದೆ ಎಂದು ಆಸ್ಪತ್ರೆ ತಿಳಿಸಿದೆ.

ಇನ್ನು ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಐಸಿಯು ನಿಂದಲೇ ಥಮ್ಸ್ ಅಪ್ ಮಾಡಿರುವ ಫೋಟೋ ಕೂಡಾ ಹೊರ ಬಂದಿದ್ದು, ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನು ವಹಿಸಲು ಅವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿದೆ‌. ಆದಷ್ಟು ಬೇಗ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಪರಿಸ್ಥಿತಿ ಸುಧಾರಿಸಿ, ಅವರು ಸಂಪೂರ್ಣ ಆರೋಗ್ಯವಂತರಾಗಿ ಮರಳಿ ಬರಲೆಂದು ಹಾರೈಸೋಣ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here