ಕೊರೊನಾ ಆತಂಕವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸೂಕ್ತ ಮುನ್ನೆಚ್ಚರಿಕೆಯ ಕ್ರಮಗಳ ಮೂಲಕ ಹಾಗೂ ಚಿಕಿತ್ಸೆಯ ಮೂಲಕ ಇದು ಗುಣವಾಗಿದೆ ಎಂಬ ವಿಷಯಕ್ಕಿಂತ ಸೋಂಕು ಬಂದರೆ ಹೇಗೆ? ಎನ್ನುವ ಭಯ ಜನರಲ್ಲಿ ಹುಟ್ಟಿಕೊಂಡಿದೆ. ಕೊರೊನಾ ಬಂದರೆ ಯಾವುದೋ ಗುಣವಾಗದ ರೋಗವೇ ಬಂದಿತೇನೋ ಎಂಬಂತೆ ಜನ ನೋಡುವುದರಿಂದ ಅನೇಕರು ಕೊರೊನಾ ಬಗ್ಗೆ ಭಯಭೀತರಾಗಿದ್ದಾರೆ. ಆದರೂ ಇದೆಲ್ಲವನ್ನು ಮೀರಿ ಕೊರೊನಾ ವಿರುಧ್ಧ ಸಮರವನ್ನು ಸಾರಿದ್ದಾರೆ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಪೋಲಿಸರು ಹಾಗೂ ಪೌರ ಕಾರ್ಮಿಕರು.

ಇಂತಹ ಸವಾಲಿನಿಂತಹ ಪರಿಸ್ಥಿತಿಯಲ್ಲಿ ಕೂಡಾ ಧೃತಿಗಡೆದೆ ಕಾರ್ಯ ನಿರ್ವಹಣೆ ಮಾಡುತ್ತಿರುವ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ಪಡುತ್ತಿರುವ ಶ್ರಮ ಹಾಗೂ ತೆಗೆದುಕೊಂಡಿರುವ ರಿಸ್ಕ್ ಬಗ್ಗೆ ಆರೋಗ್ಯ ಸಚಿವರಾದ ಶ್ರೀರಾಮುಲು ಅವರು ವೀಡಿಯೋಗಳನ್ನು ಹಂಚಿಕೊಂಡು, ಇಂತಹ ಸಾಹಸ ಕೆಲಸಕ್ಕೆ ಮುಂದಾಗಿರುವ ಆಶಾಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿಗೆ ಟ್ವೀಟ್ ಗಳ ಮೂಲಕ ಮೆಚ್ಚುಗೆಯನ್ನು ನೀಡಿದ್ದಾರೆ ಸಚಿವರು. ಅವರು ತಮ್ಮ ಟ್ವೀಟ್ ನಲ್ಲಿ ಕೊರೊನದಂತಹ ಸಂಕಷ್ಟದ ಸಮಯದಲ್ಲಿ ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಸಿಬ್ಬಂದಿ ಪ್ರತಿ ಹಳ್ಳಿಹಳ್ಳಿಗಳಿಗೆ ತೆರಳಿ ಅವಿರತವಾಗಿ ಕಾರ್ಯ ನಿರ್ವಹಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ.

ನಕ್ಸಲ್ ಪೀಡಿತ ಪ್ರದೇಶವಾದ ಬೆಳ್ತಂಗಡಿ ತಾಲ್ಲೂಕಿನ ಕೊರಗ ಕಾಲೋನಿಯಲ್ಲಿ ವಾಸಿಸುವ ಸುಮಾರು 40 ಕ್ಕೂ ಹೆಚ್ಚಿನ‌ ಕುಟುಂಬಗಳಲ್ಲಿ ಕೆಲವರಿಗೆ ಡೆಂಗ್ಯೂ ಸೇರಿದಂತೆ ಜ್ವರದ‌ ಲಕ್ಷಣಗಳು ಕಾಣಿಸಿಕೊಂಡಿವೆ. ಆ ಭಾಗದಲ್ಲಿ ಸುರಿಯುತ್ತಿರುವ ಮಳೆಯ ನಡುವೆ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ,
ರಭಸವಾಗಿ ಹರಿಯುವ ನದಿಯನ್ನು ಕಿರಿದಾದ ಕಾಲುಸೇತುವೆಯ ಮೂಲಕ ಜೀವ ಕೈಯಲ್ಲಿ ಹಿಡಿದುಕೊಂಡು ದಾಟಿ ಅವರಿಗೆ ಚಿಕಿತ್ಸೆ ನೀಡಿದ್ದಾರೆ. ಅಲ್ಲದೆ ರೋಗಗಳ ಕುರಿತು ಮುಂಜಾಗ್ರತೆ ವಹಿಸುವಂತೆ ಅರಿವು ಮೂಡಿಸಿ ಬಂದಿದ್ದಾರೆ.

ಅವರ ಕರ್ತವ್ಯ ನಿಷ್ಠೆ, ನಿಸ್ವಾರ್ಥ ಸೇವೆ ನಿಜಕ್ಕೂ‌‌ ಮೆಚ್ಚುವಂಥದ್ದು ಎಂದು ಬರೆದು, ಸೇವೆಯಲ್ಲಿ ಪ್ರಾಣವನ್ನು ಪಣಕ್ಕಿಟ್ಟು ದುಡಿಯುತ್ತಿರುವ ಆಶಾಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿಗೆ ಧನ್ಯವಾದಗಳನ್ನು ಹೇಳುತ್ತಾ, ಅವರ ಕಾರ್ಯಕ್ಕೆ ತಮ್ಮ ಮೆಚ್ಚುಗೆಯನ್ನು ಸಲ್ಲಿಸಿದ್ದಾರೆ.

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here