ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ಮಾಡಿರುವ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರಗಳು ನಡೆದಿವೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯನವರು ಮತ್ತು ಇತರರು ಮಾಡಿದ ಆರೋಪಕ್ಕೆ ಕುರಿತಂತೆ, ರಾಜ್ಯ ರಾಜಕೀಯದಲ್ಲಿ ನಡೆಯುತ್ತಿದೆ. ಈ ಕುರಿತಾಗಿ ರಾಜ್ಯದ ಆರೋಗ್ಯ ಸಚಿವರಾದ ಶ್ರೀರಾಮುಲು ಅವರು, ನಾವು ಲೂಟಿ ಹೊಡೆದಿದ್ದರೆ ದಾಖಲೆ ಬಿಡುಗಡೆ ಮಾಡಲಿ’’ ಎಂದು ಸವಾಲು ಹಾಕಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಇಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯನವರು ಕೂಡಾ ಪ್ರತಿಕ್ರಿಯೆಯನ್ನು ನೀಡಿದ್ದಾರೆ.‌

ಸಿದ್ಧರಾಮಯ್ಯನವರು, ರಾಮುಲು ಅವರೇ ಬಳ್ಳಾರಿಯ ನಿಮ್ಮ ಅಣ್ಣ ತಮ್ಮಂದಿರು ಇದೇ ರೀತಿ ಸವಾಲು ಹಾಕಿ ಕೊನೆಗೆ ದಾಖಲೆ ಬಿಡುಗಡೆ ಮಾಡಿದಾಗ ಜೈಲು ಸೇರಿದ್ದರು. ಸವಾಲೆಸೆಯುವಾಗ ಇದು ನಿಮ್ಮ ಗಮನದಲ್ಲಿರಲಿ ಎಂದು ಎಚ್ಚರಿಕೆ ನೀಡುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೇ ಅವರು ಇದೇ ಸಂದರ್ಭದಲ್ಲಿ ಬೆಂಗಳೂರು ನಗರದಲ್ಲಿ ಕೊರೊನಾ ನಿಯಂತ್ರಣಕ್ಕೆಂದು ಮೂವರು ಸಚಿವರನ್ನು ಅಂದರೆ ನೇಮಿಸಿರುವುದನ್ನು ಕುರಿತಾಗಿ ಅವರು ಬೆಂಗಳೂರಿನಲ್ಲಿ ಕರೊನಾ ನಿಯಂತ್ರಣಕ್ಕೆ ತ್ರಿಮೂರ್ತಿ ಸಚಿವರನ್ನು ನೇಮಿಸಿರುವುದು ಸೋಂಕಿತರಿಗೆ ನೆರವಾಗಲಿಕ್ಕಾ ಅಥವಾ ತಮ್ಮ ಭಿನ್ನಾಭಿಪ್ರಾಯವನ್ನು ಶಮನ ಮಾಡಲಿಕ್ಕಾ ಎಂದು ಕೇಳಿದ್ದಾರೆ.‌

ಸೃಷ್ಟಿ, ಪಾಲನೆ, ಲಯ ಇವು ಆ ತ್ರಿಮೂರ್ತಿಗಳ ಕರ್ತವ್ಯ ಎನ್ನಲಾಗಿದ್ದು, ಈ ಮೂವರು ಇವುಗಳಲ್ಲಿ ಯಾವ ಕೆಲಸ ಮಾಡಲಿದ್ದಾರಂತೆ? ಎಂದೂ ಕೂಡಾ ಟೀಕೆ ಮಾಡಿದ್ದಾರೆ. ಇನ್ನು ಕೊರೊನಾ ನಿಯಂತ್ರಣದ ವಿಷಯವಾಗಿ ಪ್ರಧಾನಿ ಮೋದಿ ಅವರಿಂದ ಶಹಭಾಸ್‌ಗಿರಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಭಿನಂದನೆಗಳು ಎನ್ನುತ್ತಲೇ ಸಿದ್ಧರಾಮಯ್ಯನವರು ವ್ಯಂಗ್ಯವಾಡಿದ್ದು ಈಗ ಪ್ರತಿದಿನ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿರುವ ಕೊರೊನಾ ನಿಯಂತ್ರಣದ ವೈಫಲ್ಯಗಳ ಸರಣಿ ವರದಿಗಳನ್ನು ಕೂಡಾ ಪ್ರಧಾನಿಗೆ ತೋರಿಸಿದ್ದರೆ ಇನ್ನಷ್ಟು ಶಹಭಾಸ್ ಅನ್ನುತ್ತಿದ್ದರೋ ಏನೋ?ಎಂದಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here