ಕರ್ನಾಟಕ ರಾಜ್ಯದ ಸಮ್ಮಿಶ್ರ ಸರ್ಕಾರದಿಂದ ಉತ್ತರ ಕರ್ನಾಟಕ ಭಾಗದ ಜನರಿಗೆ ಅನ್ಯಾಯವಾಗಿದೆ.ಇದು ಹೀಗೇ ಮುಂದುವರಿದರೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಮಾಡುವ ಹೋರಾಟಕ್ಕೆ ನಾನೇ ಮುಂದಾಳತ್ವ ವಹಿಸುತ್ತೇನೆ ಎಂದು ಭಾರತೀಯ ಜನತಾ ಪಕ್ಷದ ಮೊಳಕಾಲ್ಮೂರು ಕ್ಷೇತ್ರದ ಶಾಸಕರಾದ ಶ್ರೀರಾಮುಲು ಅವರು ಗಂಗಾವತಿ ಖಾಸಗಿ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.ಸುದ್ದಿಗಾರರ ಜೊತೆ ಮಾತನಾಡಿದ ಬಿ ಜೆಪಿಯ ಮೊಳಕಾಲ್ಮೂರು ಕ್ಷೇತ್ರದ ಶಾಸಕ ಶ್ರೀ ರಾಮುಲು‌ ಅವರು ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ

ಬಂದಾಗಿನಿಂದ ಬರೀ ಒಳಜಗಳಗಳೇ ನಡೆಯುತ್ತಿವೆ ಕುಮಾರಸ್ವಾಮಿ ಅವರು ಮಂಡಿಸಿರುವ ಬಜೆಟ್ ನಲ್ಲಿ ಉತ್ತರ ಕರ್ನಾಟಕ ಭಾಗದ ಜನರಿಗೆ ಅನ್ಯಾಯ ಆಗಿದೆ.ಹೀಗಾಗಿ ಈ ಮಲತಾಯಿ ಧೋರಣೆ ಹೀಗೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಈ ಭಾಗದ ಜನತೆ ಪ್ರತ್ಯೇಕ ರಾಜ್ಯದ ಬೇಡಿಕೆಗೆ ಹೋರಾಟ ಮಾಡಲಿದ್ದಾರೆ.ಸಮ್ಮಿಶ್ರ ಸರ್ಕಾರದ ವತಿಯಿಂದ ಈ ಮಲತಾಯಿ ಧೋರಣೆ ಹೀಗೇ ಮುಂದುವರಿದರೆ ನಾನೇ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟದ ನೇತೃತ್ವ ವಹಿಸುತ್ತೇನೆ ಎಂದು

ಶಾಸಕ ಶ್ರೀರಾಮುಲು ತಿಳಿಸಿದರು ಇದೇ ವೇಳೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಪದೇ ಅಳುವುದರ ಕುರಿತು ಮಾತನಾಡಿದ ಶ್ರೀರಾಮುಲು ಅವರು ಮನುಷ್ಯ ಎಂದಮೇಲೆ ಭಾವನಾತ್ಮಕವಾಗಿ ಅಳುವುದು ಸಹಜ.ಆದರೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಇರುವುದರಿಂದ ಅಳುವುದು ಆ ಕುರ್ಚಿಗೆ ಅವರ ಸ್ಥಾನಮಾನಕ್ಕೆ ಶೋಭೆ ತರುವುದಿಲ್ಲ ಎಂದು ಬಿಜೆಪಿ ಮೊಳಕಾಲ್ಮೂರು ಕ್ಷೇತ್ರದ ಶಾಸಕ ಶ್ರೀರಾಮುಲು ಅವರು ನೆನ್ನೆ ಗಂಗಾವತಿಯಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ‌.

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here