ರಾಜ್ಯದಲ್ಲಿ ಡೆಂಗಿ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗ್ತಿದೆ.‌ 10 ಸಾವಿರಕ್ಕೂ ಅಧಿಕ ಮಂದಿಗೆ ಈ ಸೋಂಕು ತಗುಲಿದ್ದು, ಆರೋಗ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ.ಬೆಂಗಳೂರು ಫಸ್ಟ್, ದಕ್ಷಿಣ ಕನ್ನಡ ನೆಕ್ಸ್ಟ್ ಹೌದು ರಾಜ್ಯದಲ್ಲಿ ಈಗಾಗಲೇ ಒಟ್ಟು 10,524 ಡೆಂಗಿ ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ನಗರ ಪ್ರಥಮ ಸ್ಥಾನದಲ್ಲಿದ್ದರೆ ಇತ್ತ ದಕ್ಷಿಣ-ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಅದರಲ್ಲಿ ಆರು ಜನ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ 6,515 ಡೆಂಗಿ ಪ್ರಕರಣ ದಾಖಲಾಗಿದ್ದರೆ, ಇತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 948 ಪ್ರಕರಣಗಳು ದಾಖಲಾಗಿ ಜನರಲ್ಲಿ ಆತಂಕ ಮೂಡಿಸಿದೆ.

ಆದರೆ ಇಷ್ಟೆಲ್ಲ ಪ್ರಕರಣಗಳು ಕಂಡುಬಂದರೂ ಸಹ ಅರೋಗ್ಯ ಇಲಾಖೆ ಕಣ್ಣು ತೆರೆದಿಲ್ಲ. ನಿಗದಿತ ಆಸ್ಪತ್ರೆಗಳಲ್ಲಿ ಮಾತ್ರ ಚಿಕಿತ್ಸೆ ವ್ಯವಸ್ಥೆ ಮಾಡಿರುವುದು ರೋಗಿಗಳು ಚಿಕಿತ್ಸೆಗಾಗಿ ಅಲೆದಾಡುವಂತೆ ಆಗಿದೆ. ಎಲ್ಲ ಖಾಸಗಿ ಆಸ್ಪತ್ರೆಗಳು ಸಹ ಡೆಂಗ್ಯೂ ಜ್ವರಕ್ಕೆ ಕಮ್ಮಿ ದರದಲ್ಲಿ ಚಿಕಿತ್ಸೆ ಕೊಡುವಂತೆ ರಾಜ್ಯ ಸರ್ಕಾರ ಆದೇಶ ನೀಡಬೇಕು ಎಂಬುದು ಜನರ ಮಾತಾಗಿದೆ.

ಇನ್ನುಳಿದಂತೆ ಶಿವಮೊಗ್ಗ (384), ಹಾವೇರಿ (272), ಚಾಮರಾಜನಗರ (199), ಕಲಬುರಗಿ (183), ಹಾಸನ (157), ಉಡುಪಿ (167), ಚಿಕ್ಕಮಗಳೂರು (165), ದಾವಣಗೆರೆ (161) ಜಿಲ್ಲೆಗಳಲ್ಲಿ ಅತೀ ಹೆಚ್ಚು ಡೆಂಗಿ ಪ್ರಕರಣಗಳು ಕಂಡುಬಂದಿರುವ ಪ್ರಮುಖ ಜಿಲ್ಲೆಗಳಾಗಿವೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಇಲಾಖೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದೆ. ಪ್ರತೀ ಹಳ್ಳಿ, ನಗರ ಪ್ರದೇಶ ಸೇರಿದಂತೆ ನೀರು ನಿಂತ ಕಡೆ ಲಾರ್ವಾ ಸೊಳ್ಳೆ ನಾಶಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಇಲಾಖೆ ತಿಳಿಸಿದೆ. ಹಾಗು ಸಾರ್ವಜನಿಕರು ಇದಕ್ಕೆ ಸಹಕರಿಸಬೇಕೆಂದು ಮನವಿ ಮಾಡಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here