ಒಂದು ವಾರಗಳಿಂದ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಆಗಲಿದೆ ಎಂಬ ಚರ್ಚೆಗಳು ನಡೆಯುತ್ತಿತ್ತು. ರಾಜ್ಯದಲ್ಲಿ ದಿನೇದಿನೇ ಹೆಚ್ಚುತ್ತಿರುವ ಕೊರೋನಾ ಮಹಾಮಾರಿ ತಡೆಗಟ್ಟಲು ಲಾಕ್ ಡೌನ್ ಒಂದೇ ಪರಿಹಾರ ಎಂಬ ಮಾತುಗಳು ಕೇಳಿಬಂದಿದ್ದವು.ಆದರೆ
ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ಇಂತಹ ಸಂದರ್ಭದಲ್ಲಿ ಮತ್ತೆ ಲಾಕ್ ಡೌನ್ ಮಾಡುವುದಿಲ್ಲ. ಕೊರೋನ ತಡೆಗೆ ಎಲ್ಲರ ಸಹಕಾರ ಅಗತ್ಯ ಎಂದು ಯಡಿಯೂರಪ್ಪ ಕೋರಿದರು.ಸರ್ಕಾರ ಕೊರೊನಾ ಸೋಂಕು ನಿಯಂತ್ರಣಕ್ಕೆ ಎಲ್ಲ ಕ್ರಮಗಳನ್ನು ತೆಗೆದುಕೊಂಡಿದೆ. ಶಾಸಕರು ಅವರವರ ಕ್ಷೇತ್ರಗಳತ್ತ ಗಮನಹರಿಸುವ ಅಗತ್ಯವಿದೆ.

ಇಂದು ಬೆಂಗಳೂರು ನಗರದ ಶಾಸಕರ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.ನಗರದಲ್ಲಿ ‌ಕೊರೋನ ಸೋಂಕು ನಿಯಂತ್ರಿಸುವ ಸಂಬಂಧ ಎಲ್ಲರ ಅಭಿಪ್ರಾಯ‌ ಪಡೆದು ಸೂಕ್ತ ತೀರ್ಮಾನ ಮಾಡಲಾಗುವುದು ಎಂದು ಅವರು ಪ್ರತಿಕ್ರಿಯೆ ನೀಡಿದರು

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here