ರಾಜ್ಯದಲ್ಲಿ ಪ್ರವಾಹದಿಂದ ಉಂಟಾದ ಉಪದ್ರವಗಳ ಬಗ್ಗೆ ಎಲ್ಲರಿಗೂ ತಿಳಿದಿದೆ. ಆದರೆ ಇಷ್ಟೆಲ್ಲಾ ನಷ್ಟವಾಗಿ ಜನರು ಸಂಕಷ್ಟಕ್ಕೆ ಗುರಿಯಾದರೂ ಕೂಡಾ, ಜನರ ನೆರವಿಗೆ ಕೇಂದ್ರ ಸರ್ಕಾರ ಬಂದಿಲ್ಲ. ಇದರ ಬಗ್ಗೆ ಈಗಾಗಲೇ ಜನರು ತಮ್ಮ ಅಸಮಾಧಾನ ಹೊರಹಾಕುತ್ತಿದ್ದಾರೆ. ಪರಿಸ್ಥಿತಿ ಹೀಗಿರುವಾಗ, ರಾಜ್ಯಕ್ಕೆ ಕೇಂದ್ರ ಸರ್ಕಾರ ಯಾವುದೇ ನೆರವು ನೀಡುವ ಅವಶ್ಯಕತೆ ಇಲ್ಲ. ರಾಜ್ಯ ಸರ್ಕಾರದ ಬಳಿಯೇ ಸಾಕಷ್ಟು ಹಣವಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಬೆಳಗಾವಿಯಲ್ಲಿ ಹೇಳಿಕೆಯೊಂದನ್ನು ನೀಡುವು ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದಾರೆ.

 

ಸಂಸದರಾದ ತೇಜಸ್ವಿ ಸೂರ್ಯ ಅವರು ಹುಕ್ಕೇರಿಯ ಹೀರೇಮಠದಲ್ಲಿ ಮಾತನಾಡುವ ಸಂದರ್ಭದಲ್ಲಿ, ನೆರೆ ಪರಿಹಾರಕ್ಕೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ಕಾರಣ ನೀಡಿ ಕೇಂದ್ರ ಸರ್ಕಾರದ ಬಳಿ ಹಣಕ್ಕಾಗಿ ಬೇಡಿಕೆ ಇಟ್ಟಾಗಲೂ ಕೇಂದ್ರ ಸರ್ಕಾರವು ಹಣವನ್ನು ಕೊಡದೇ ಇದ್ದರೆ ಅದು ತಪ್ಪು. ಆದರೆ ಕರ್ನಾಟಕ ರಾಜ್ಯ ಸರ್ಕಾರದಲ್ಲೇ ಎಲ್ಲಾ ಸೌಕರ್ಯಗಳು ಇವೆ ಎಂದು ಅವರು ಹೇಳಿದ್ದಾರೆ. 14ನೇ ಹಣಕಾಸು ಆಯೋಗದ ಶಿಫಾರಸ್ಸಿನ ನಂತರ ಕರ್ನಾಟಕ ರಾಜ್ಯ ಸರ್ಕಾರದ ಬಳಿ ಹಣ ಜಾಸ್ತಿಯೇ ಇದೆ ಎಂದು ಅವರು ಮಾಹಿತಿಯನ್ನು ನೀಡಿದ್ದಾರೆ.

ಈ ಹಿಂದೆ ರಾಜ್ಯವು ಅವಶ್ಯಕತೆ ಇದ್ದಾಗ, ಪ್ರತಿ ಬಾರಿಯೂ ಕೂಡಾ ಹಣ ಸಹಾಯವನ್ನು ನೀಡಿ ಎಂದು ಕೇಂದ್ರದ ಬಳಿ ಹೋಗಬೇಕಿತ್ತು. ಆದರೆ ಪ್ರಸ್ತುತ ಅಂತಹ ಯಾವುದೇ ಪರಿಸ್ಥಿತಿ ಇಲ್ಲ ಎಂದಿರುವ ಅವರು, ಮೋದಿಯವರ ಸರ್ಕಾರ ಬಂದ ನಂತರದಲ್ಲಿ 14 ನೇ ಹಣಕಾಸು ಆಯೋಗದ ಶಿಫಾರಸ್ಸು ಜಾರಿ ಮಾಡಲಾಗಿದೆ. ರಾಜ್ಯ ಸರ್ಕಾರದ ಬಳಿಯೇ ಸಾಕಷ್ಟು ಹಣವಿದೆ‌ ಎಂದು ಹೇಳಿದ್ದಾರೆ. ಅಲ್ಲಿಗೆ ನೆರೆ ಪರಿಹಾರಕ್ಕೆ ಅಗತ್ಯವಿರುವ ಹಣ ರಾಜ್ಯ ಸರ್ಕಾರದಲ್ಲಿ ಇದೆ ಎಂಬಂತೆ ಅವರು ಹೇಳಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here