ರಾಮನಗರದ ಹಾರೋಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆಯ ಜೇಳೂರು, ಬಾಗಲಕೋಟೆಯ ತೇರದಾಳ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕಳಸವನ್ನು ಹೊಸ ತಾಲೂಕುಗಳನ್ನಾಗಿ ರಚಿಸುವುದಾಗಿ ಘೋಷಿಸಿದ್ದಾರೆ.
ಸಿರಿಧಾನ್ಯಗಳ ಕೃಷಿಗೆ ಹೆಚ್ಚಿನ
ಒತ್ತು ನೀಡಲು ಸರ್ಕಾರ ಪ್ರಯತ್ನಿಸುತ್ತಿದೆ. ಇದಕ್ಕಾಗಿ ಅದು ಸಿರಿಧಾನ್ಯ ಮೇಳ ಸೇರಿ ವಿವಿಧ ಉಪಕ್ರಮಗಳನ್ನು ಕೈಗೊಳ್ಳುತ್ತಿದೆ. ಇದಕ್ಕೆ ಪೂರಕವಾಗಿ 2019-2020ನೇ ಸಾಲಿನ ಬಜೆಟ್​ನಲ್ಲಿ ಸಿರಿಧಾನ್ಯ ಬೆಳೆಯುವ ರೈತರ ಬ್ಯಾಂಕ್​ ಖಾತೆಗಳಿಗೆ ನೇರವಾಗಿ 10 ಸಾವಿರ ರೂ. ಪ್ರೋತ್ಸಾಹ ಧನವನ್ನು ವರ್ಗಾವಣೆ ಮಾಡಲು ಸರ್ಕಾರ ನಿರ್ಧರಿಸಿದೆ.

ಒಂದೇ ಸೂರಿನಡಿ ಪ್ರಾಥಮಿಕ ಪ್ರೌಢ ಶಿಕ್ಷಣ, ಶಾಲೆಗಳ ಅಭಿವೃದ್ಧಿಗೆ 1200 ಕೋಟಿ ನೀಡಲಾಗುತ್ತದೆ. ಎಲ್ಲರಿಗೂ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಗುರಿಯಾಗಿದೆ. ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಯೋಜನೆ. 176 ಕರ್ನಾಟಕ ಪಬ್ಲಿಕ್ ಸ್ಕೂಲ್ ಸ್ಥಾಪನೆ. ಮಕ್ಕಳ ಸುರಕ್ಷತೆಗೆ ಹೆಚ್ಚಿನ ಒತ್ತು. 3,389 ಪ್ರಾಥಮಿಕ ಶಿಕ್ಷಕರ ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಆಟೋ ಮತ್ತು ಟ್ಯಾಕ್ಸಿ ಚಾಲಕರಿಗಾಗಿ ಗುಂಪು ವಿಮೆ ಸೌಲಭ್ಯ ವ್ಯವಸ್ಥೆ

ಪೆಟ್ರೋಲ್ ಆಟೋ ಎಲೆಕ್ಟ್ರಿಕ್ ಆಟೋ ಪರಿವರ್ತನೆಗೆ ಸಹಾಯಧನ

ಸಾರಿಗೆ ಇಲಾಖೆ ಮೂಲಕ ಈ ಯೋಜನೆಗೆ 30 ಕೋಟಿ ರೂಪಾಯಿ

ವಿವಿಧ ವಲಯಗಳ ಚಾಲಕರ ಸೇವೆ ಗುರುತಿಸಲು ಚಾಲಕರ ದಿನಾಚರಣೆ

ಎಲ್ಲಾ ಜಿಲ್ಲೆಗಳಲ್ಲಿಯೂ ಚಾಲಕರ ದಿನಾಚರಣೆ ಮಾಡಲು ತೀರ್ಮಾನ

ಪ್ರಾಮಾಣಿಕ, ಅಪಘಾತ ರಹಿತ ವಾಹನ ಚಾಲನೆ ಮಾಡಿದ್ದರೆ ಪುರಸ್ಕಾರ

ಪ್ರತಿ ಜಿಲ್ಲೆಯ ತಲಾ 10 ಚಾಲಕರಿಗೆ ತಲಾ 25 ಸಾವಿರ ರೂ ಪುರಸ್ಕಾರ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here