ದೋಸ್ತಿಗಳು ವಿಶ್ವಾಸ ಮತ ಯಾಚನೆಯ ಪ್ರಕ್ರಿಯೆಯನ್ನು ಸೋಮವಾರಕ್ಕೆ ಮುಂದೂಡಿದ್ದಾರೆ. ಮಾನ್ಯ ಮುಖ್ಯಮಂತ್ರಿ ಅವರು ರಾಜ್ಯಪಾಲರು ನೀಡಿದ ಡೆಡ್ ಲೈನ್ ಗಳನ್ನು ಪರಿಗಣಿಸಿಲ್ಲ. ಮೈತ್ರಿ ಸರ್ಕಾರ ರಾಜ್ಯಪಾಲರನ್ನು ಕಡೆಗಣಿಸಿದ ಹಿನ್ನೆಲೆಯಲ್ಲಿ, ಅವರು ಕೇಂದ್ರ ಸರ್ಕಾರಕ್ಕೆ ಮಧ್ಯಂತರ ವರದಿಯ ಮೂಲಕ ಮೈತ್ರಿ ಸರ್ಕಾರದ ವಿರುದ್ಧ ದೂರು ನೀಡಿದ್ದಾರೆ. ರಾಜ್ಯದಲ್ಲಿ ಶಾಸಕರ ರಾಜೀನಾಮೆಯಿಂದಾಗಿ ಮೈತ್ರಿ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ‌. ರಾಜ್ಯ ರಾಜಕಾರಣವು ಹಳಿ ತಪ್ಪಿ ನಡೆಯುತ್ತಿದೆ ಎಂದು ಅವರು ವರದಿಯಲ್ಲಿ ತಿಳಿಸಿದ್ದಾರೆ.

ರಾಜೀನಾಮೆ ನೀಡಿದವರು ಮೈತ್ರಿ ಸರ್ಕಾರದ ಮೇಲಿನ ಅಸಮಾಧಾನದಿಂದ ಮುಂಬೈ ಸೇರಿದ್ದಾರೆ. ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರು ರೆಸಾರ್ಟ್ ಸೇರಿದ್ದಾರೆ. ಕುದುರೆ ವ್ಯಾಪಾರ ಭೀತಿಯಿಂದ ಬಿಜೆಪಿ ಶಾಸಕರು ಕೂಡಾ ರೆಸಾರ್ಟ್ ಸೇರಿದ್ದಾರೆ. ರಾಜ್ಯದಲ್ಲಿ ಜನರ ಕಷ್ಟಗಳಿಗೆ ಆಡಳಿತ ವ್ಯವಸ್ಥೆ ಸ್ಪಂದಿಸುತ್ತಿಲ್ಲ. ಮುಖ್ಯಮಂತ್ರಿಗಳು ವಿಶ್ವಾಸ ಮತ ಯಾಚನೆ ಮಾಡುವುದಾಗಿ ಹೇಳುತ್ತಲೇ, ಸತಾಯಿಸುತ್ತಾ ಬರುತ್ತಿದ್ದಾರೆ. ಸುಪ್ರೀಂ ಕೋರ್ಟ್ ಸ್ಪೀಕರ್ ಅವರಿಗೆ ಈಗಾಗಲೇ ನೀಡಿರುವ ನಿರ್ದೇಶನವನ್ನು ಕೂಡಾ ಮರೆತಂತೆ ಅವರು ಕಾಲಹರಣಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ತಮ್ಮ ವರದಿಯಲ್ಲಿ ದೂರಿದ್ದಾರೆ ರಾಜ್ಯಪಾಲರು.

ರಾಜ ಭವನದ ಕಡೆಯಿಂದ ವಿಶೇಷ ಅಧಿಕಾರಿ ಸದನದಲ್ಲಿ ಉಪಸ್ಥಿತರಿದ್ದು, ಕ್ಷಣ ಕ್ಷಣದ ಮಾಹಿತಿಯನ್ನು ನೀಡಿದ್ದಾರೆ. ಸ್ಪೀಕರ್ ಹಾಗೂ ದೋಸ್ತಿ ಸರ್ಕಾರ ರಾಜೀನಾಮೆ ನೀಡಿರುವ ಶಾಸಕರನ್ನು ಅನರ್ಹಗೊಳಿಸುವ ಪ್ರಯತ್ನವನ್ನು ಕೂಡಾ ಮಾಡುತ್ತಿದೆ ಎಂದು ರಾಜ್ಯಪಾಲರು ತಮ್ಮ ಸುದೀರ್ಘ ವರದಿಯ ಮೂಲಕ ಕೇಂದ್ರಕ್ಕೆ ದೂರನ್ನು ನೀಡಿದ್ದಾರೆ. ಈ ದೂರಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಪ್ರತಿಕ್ರಿಯೆ ನೀಡುವುದು ಎಂಬುದನ್ನು ನಿರೀಕ್ಷಿಸಬೇಕಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here