ಕೊರೊನ ಭಯದ  ಮಧ್ಯೆ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಪರೀಕ್ಷೆ ಬರೆದ ಒಟ್ಟು 8,11,050 ವಿದ್ಯಾರ್ಥಿಗಳ ಪೈಕಿ ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.71.80 ಫಲಿತಾಂಶ ದಾಖಲಾಗಿದೆ. ಕಳೆದ ವರ್ಷ ಶೇ.73.70 ಫಲಿತಾಂಶ ದಾಖಲಾಗಿತ್ತು.

ಮಧ್ಯಾಹ್ನ ಮೂರು ಗಂಟೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರವನ್ನು ಪ್ರಕಟಿಸಿದರು. ಎಂದಿನಂತೆ ಬಾಲಕಿಯರೇ ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆಯಾಗಿದ್ದಾರೆ. ಶೇ. 77.74 ಬಾಲಕಿಯರು ತೇರ್ಗಡೆಯಾಗಿದ್ದರೆ, ಶೇ. 66.41 ಬಾಲಕರು ತೇರ್ಗಡೆಯಾಗಿದ್ದಾರೆ. 223 ಮೌಲ್ಯಮಾಪನ ಕೇಂದ್ರದಲ್ಲಿ 52,219 ಮೌಲ್ಯಮಾಪಕರು ಮೌಲ್ಯಮಾಪನ ಮಾಡಿದ್ದಾರೆ.

19,086 ಮಂದಿ ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯದಿದ್ದರೆ, 8,067 ಪೂರಕ ಪರೀಕ್ಷೆ ಬರೆಯಲಿದ್ದಾರೆ. ಕಳೆದ ಬಾರಿ 625ಕ್ಕೆ 625 ಅಂಕವನ್ನು ಇಬ್ಬರು ಪಡೆದಿದ್ದರೆ ಈ ಬಾರಿ 6 ಮಂದಿ 625 ಅಂಕ ಪಡೆದಿದ್ದಾರೆ. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಮಧುಗಿರಿ ಅನುಕ್ರಮವಾಗಿ ಮೊದಲ ಮೂರು ಸ್ಥಾನ ಪಡೆದಿದ್ದರೆ ಯಾದಗಿರಿ ಕೊನೆಯ ಸ್ಥಾನವನ್ನು ಪಡೆದಿದೆ.

ವಿದ್ಯಾರ್ಥಿಗಳು www.kseeb.kar.nic.in ಮತ್ತು www.karresults.nic.in ವೆಬ್‍ಸೈಟ್‍ಗಳಲ್ಲಿ ಫಲಿತಾಂಶವನ್ನು ನೋಡಬಹುದು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here