ಬಾದಾಮಿಯಲ್ಲಿ ೨ನೇ ಕ್ಷೇತ್ರವಾಗಿ ಆಯ್ಕೆ ಮಾಡಿಕೊಂಡು ಸ್ಪರ್ಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರಿಗೆ ಮಾಸ್ಟರ್ ಸ್ಟ್ರೋಕ್ ನೀಡಲು ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ.
ಸ್ಯಾಂಡಲ್’ವುಡ್ ಸ್ಟಾರ್ ಕಿಚ್ಚ ಸುದೀಪ್  ಅವರು ಸಿಎಂ ಸಿದ್ದರಾಮಯ್ಯ ಪರ ಬಾದಾಮಿಯಲ್ಲಿ ಪ್ರಚಾರ ಮಾಡಲಿದ್ದಾರೆ.

ಬಾಗಲಕೋಟೆ ಜಿಲ್ಲೆ ಬಾದಾಮಿ ಕ್ಷೇತ್ರದಲ್ಲಿ ಮೇ.9ರಂದು ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ.ಅದೇ ರೀತಿ ಚಾಮುಂಡೇಶ್ವರಿಯಲ್ಲಿ ಸಿಎಂ ಪರ ಕಿಚ್ಚ ಕಮಾಲ್ ಮಾಡುವ ಸಾಧ್ಯತೆಯಿದೆ.
ಬಿಜೆಪಿ ಪರವೂ ಬ್ಯಾಟಿಂಗ್
ಯಾದಗಿರಿ ಜಿಲ್ಲೆ ಸುರಪುರ ಕ್ಷೇತ್ರದ ಬಿಜೆಪಿ ಶಾಸಕ ರಾಜುಗೌಡ ಸುದೀಪ್ ಅವರಿಗೆ ಆಪ್ತ ಸ್ನೇಹಿತರಾಗಿದ್ದು ಅವರ ಪರವು ಪ್ರಚಾರ ಕೈಗೊಳ್ಳಲಿದ್ದಾರೆ.

ರಾಜುಗೌಡ ನನ್ನ ತಮ್ಮನಿದ್ದಂತೆ. ಆತನ ಪರವು ಪ್ರಚಾರ ನಡೆಸುವುದಾಗಿ ತಿಳಿಸಿದ ಅವರು, ನಾನು ಕಲಾವಿದ, ನನಗೆ ಯಾವುದೇ ಪಕ್ಷದ ಹಂಗು, ಮುಲಾಜು ಇಲ್ಲ’ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.
ಕನ್ನಡದ ಖ್ಯಾತ ನಟ, ಕರ್ನಾಟಕದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವಂತಹ ಕಿಚ್ಚ ಸುದೀಪ್ ಈ ಬಾರಿಯ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತಿದ್ದಾರೆ.

ಆದರೆ ಪಕ್ಷ ರಾಜಕಾರಣದಿಂದ ತಾನು ದೂರವೇ ಉಳಿಯುವುದಾಗಿ ಕಿಚ್ಚ ಸುದೀಪ್ ನಿರ್ಧರಿಸಿದ್ದಾರೆ. ಆದರೆ ತಮ್ಮ ಆತ್ಮೀಯ ಕೆಲವು ಮಿತ್ರರುಗಳ ಪರವಾಗಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುವುದಾಗಿ ಸುದೀಪ್ ತಿಳಿಸಿದ್ದಾರೆ. ಭಾರತೀಯ ಜನತಾ ಪಕ್ಷದ ಸುರಪುರದ ಅಭ್ಯರ್ಥಿ ರಾಜು ಗೌಡ ಪರವಾಗಿ ಸುದೀಪ್ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜು ಗೌಡರವರು ನನ್ನ ಆತ್ಮೀಯರು. ನನ್ನ ತಮ್ಮ ಎಂದೇ ನಾನು ಅವರನ್ನು ಕರೆಯುತ್ತೇನೆ. ಹೀಗಾಗಿ ಅವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದಾರೆ.

 

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here