ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿದ ಹಿನ್ನೆಲೆಯಲ್ಲಿ ಇಂದಿನಿಂದ ಲಾಕ್ ಡೌನ್ ಜಾರಿಯಾಗಿದೆ. ಅಲ್ಲದೇ ಕೊರೊನಾವನ್ನು ಪರಿಣಾಮಕಾರಿಯಾಗಿ ನಿಯಂತ್ರಣ ಮಾಡುವ ಉದ್ದೇಶದಿಂದ ಸರ್ಕಾರವು ಹೊಸ ಕಾರ್ಯತಂತ್ರವನ್ನು ರೂಪಿಸಲಾಗುತ್ತಿದ್ದು, ಅದರ ಅನ್ವಯ ಕಾರ್ಯವನ್ನು ನಿರ್ವಹಣೆ ಮಾಡುವಂತೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ವಲಯವಾರು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಸಚಿವರು ಇಂದು ಸುಮಾರು ಎರಡು ಗಂಟೆಗಳಿಗೂ ಅಧಿಕ ಕಾಲ ಅಧಿಕಾರಿಗಳ ಜೊತೆ ವೀಡಿಯೋ ಸಂವಾದ ನಡೆಸಿ ಮಾಹಿತಿ ಸಂಗ್ರಹಣೆ ಮಾಡಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದ ವಿಚಾರದಲ್ಲಿ
ನಿರ್ದಿಷ್ಟ ಹೊಣೆಗಾರಿಕೆಯನ್ನು ವಹಿಸಿಲಾಗಿರುವ ಅಧಿಕಾರಿಗಳು ತಮ್ಮ ಸಹೋದ್ಯೋಗಿಗಳ ಜೊತೆ ಸಮನ್ವಯ ಸಾಧಿಸಿ ತಮ್ಮ ಕಾರ್ಯನಿರ್ವಹಣೆ ಮಾಡುವಂತೆ, ಈಗ ಜಾರಿ ಮಾಡಲಾಗಿರುವ ಲಾಕ್ ಡೌನ್ ಅವಧಿ ಮುಗಿಯುವ ಮುನ್ನವೇ ಬೂತ್ ಮಟ್ಟದಲ್ಲಿ ಸಮಿತಿಗಳ ಪೂರ್ಣ ಪ್ರಮಾಣದ ಕಾರ್ಯ ನಿರ್ವಹಿಸಿ, ಸಮಿತಿಗಳ ರಚನೆ, ತರಬೇತಿಗಳನ್ನು ಒಂದೆರಡು ದಿನಗಳಲ್ಲಿ ಮಾಡಿ, ನಿಗಧಿ ಮಾಡಿದ ಬೂರ್ ಗಳಲ್ಲಿ ಪ್ರತಿ ಮನೆಗೂ ತೆರಳಿ ಸಮೀಕ್ಷೆ ನಡೆಸಬೇಕು ಎನ್ನಲಾಗಿದೆ.‌

ಸಮೀಕ್ಷೆ ನಡೆಸುವ ವೇಳೆ ILI ಮತ್ತು SARI ಪ್ರಕರಣಗಳ ತಪಾಸಣೆ ಮಾಡಿ ಅವರ ಲಕ್ಷಣಗಳನ್ನು ಆಧರಿಸಿ ಮನೆಯಲ್ಲೇ ಕ್ವಾರಂಟೈನ್, ಕೋವಿಡ್ ಕೇರ್ ಸೆಂಟರ್ ಅಥವಾ ಕೋವಿಡ್ ಆಸ್ಪತ್ರೆಗಳಿಗೆ ದಾಖಲು ಮಾಡುವ ಕೆಲಸ ಆಗಬೇಕೆಂದು ಸೂಚನೆ ನೀಡಿದ್ದಾರೆ.
ಈ ಬಗ್ಗೆ ಎಲ್ಲಾ ಸಮಿತಿ ಸದಸ್ಯರಿಗೆ ತರಬೇತಿ ವೇಳೆಯಲ್ಲೇ ಮಾರ್ಗಸೂಚಿ ಮನವರಿಕೆ ಮಾಡಿಸಬೇಕು ಎಂದಿದ್ದಾರೆ. ಜೊತೆಗೆ ಅವರಿಗೆ ಪಲ್ಸ್ ಆಕ್ಸಿಮೀಟರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ಯಂತ್ರಗಳನ್ನು ಸದಸ್ಯರಿಗೆ ಒದಗಿಸುವುದು, ಅಂಬುಲೆನ್ಸ್ ಒದಗಿಸುವುದು ಕೂಡಾ ಸಮಿತಿಯ ಜವಾಬ್ದಾರಿಯಾಗಿದ್ದು, ಸೋಂಕಿತರೊಡನೆ ಸಂಪರ್ಕಿತರ ಪತ್ತೆ ಕಾರ್ಯವೂ ನಡೆಯಬೇಕು ಎಂದು ಸೂಚಿಸಿದ್ದಾರೆ. ‌

ಅಲ್ಲದೇ ಕೊಳಚೆ ಪ್ರದೇಶ ಮತ್ತು ಹೋಮ್ ಕ್ವಾರಂಟೈನ್ ಕ್ವಾರಂಟೈನ್ ಸೌಲಭ್ಯಗಳು ಇಲ್ಲದಿರುವ ಕಡೆಗಳಲ್ಲಿ ಕೊರೊನಾ ಪಾಸಿಟಿವ್ ಆದ ಸೋಂಕಿತರನ್ನು ಸರ್ಕಾರಿ ವ್ಯವಸ್ಥೆಯ ಕ್ವಾರಂಟೈನ್ ಕೇಂದ್ರಗಳಲ್ಲಿ ಇಡಲು ಕ್ರಮ ಕೈಗೊಳ್ಳಬೇಕು. ಅಲ್ಲದೇ ಈ ವಿಷಯದಲ್ಲಿ ಮುಂಬೈನ ಧಾರಾವಿಯಲ್ಲಿ ಈಗಾಗಲೇ ಅಳವಡಿಸಿ, ಒಂದು ಮಟ್ಟದಲ್ಲಿ ಕೊರೊನಾ ನಿಯಂತ್ರಣಕ್ಕೆ ತರಲು ಸಾಧ್ಯವಾಗಿರುವ ವ್ಯವಸ್ಥೆ ಇಲ್ಲು ಕೂಡಾ ರೂಪಿಸಿಕೊಳ್ಳಬೇಕು ಎಂದರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here