ನಟಿ ಸುಧಾರಾಣಿ ಅವರನ್ನು ಆಸ್ಪತ್ರೆಯ ಮುಂದೆ ಒಂದು ಗಂಟೆ ಕಾಲ ಕಾಯಿಸಿ ಅವರಿಗೆ ತೊಂದರೆ ನೀಡಿದ ಅಪೋಲೋ ಆಸ್ಪತ್ರೆಯ ವಿರುದ್ಧ ಶಿಸ್ತಿನ ಕ್ರಮವನ್ನು ಜರುಗಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ.‌
ಈ ವಿಷಯವಾಗಿ ಮಾನ್ಯ ಸಚಿವರು ಒಂದು ಟ್ವೀಟ್ ಕೂಡಾ ಮಾಡಿದ್ದಾರೆ. ಅವರು ತಮ್ಮ ಟ್ವೀಟ್ ನಲ್ಲಿ
ನಟಿ ಸುಧಾರಾಣಿ ಅರೋಗ್ಯ ಸಮಸ್ಯೆಯಿಂದ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ಬಂದರೂ ಚಿಕಿತ್ಸೆಗೆ ತಡಮಾಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ. ಅವರಷ್ಟೇ ಅಲ್ಲ ಸಾಮಾನ್ಯ ವ್ಯಕ್ತಿ ಯಾರೇ ಆಗಲಿ ಚಿಕಿತ್ಸೆ ಸಿಗದೇ ಪರದಾಡಬಾರದು. ಆ ಖಾಸಗಿ ಆಸ್ಪತ್ರೆಯ ವಿರುದ್ಧ ಶಿಸ್ತು ಕ್ರಮವಹಿಸಲಾಗುವುದು ಎಂದು ಹೇಳಿದ್ದಾರೆ.

 

ನಟಿ ಸುಧಾರಾಣಿ ಅವರ ಸಹೋದರನ ಪುತ್ರಿ ಕಿಡ್ನಿ ಕಲ್ಲಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ತಡರಾತ್ರಿ ಸಮಸ್ಯೆಯಿಂದ ಆಕೆ ತಲೆ ಸುತ್ತಿ ಬಿದ್ದಿದ್ದಾರೆ. ಹೀಗಾಗಿ ಕೂಡಲೇ ಆಕೆಯನ್ನು ಸುಧಾರಾಣಿಯವರು ಆ್ಯಂಬುಲೆನ್ಸ್​ನಲ್ಲಿ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದಿದ್ದರು. ಆ ವೇಳೆಯಲ್ಲಿ ಆಸ್ಪತ್ರೆಯ ಸಿಬ್ಬಂದಿ ರಾತ್ರಿ 10 ಗಂಟೆಯಿಂದ 11 ಗಂಟೆಯವರೆಗೆ ಗೇಟ್ ​ಬಳಿ ಅವರನ್ನು ಕಾಯಿಸಿದ್ದಾರೆ. ಅನಂತರ ನಮ್ಮಲ್ಲಿ ಬೆಡ್, ವೆಂಟಿಲೇಟರ್ ಇಲ್ಲವೆಂದು ಅವರು ಬೇಜವಾಬ್ದಾರಿಯಿಂದ ಉತ್ತರ ನೀಡಿದ್ದಾರೆ ಎಂದು ಹೇಳಲಾಗಿದೆ.

ಈ ವಿಷಯ ಮಾದ್ಯಮಗಳಲ್ಲಿ ಸುದ್ದಿಯಾಗಿದ್ದು, ಇದು ಆರೋಗ್ಯ ಶಿಕ್ಷಣ ಸಚಿವರ ಗಮನಕ್ಕೆ ಕೂಡಾ ಬಂದಿದೆ‌. ಅದಕ್ಕೆ ಕೂಡಲೇ ಪ್ರತಿಕ್ರಿಯೆ ನೀಡಿರುವ ಸಚಿವರು ಹೀಗೆ ಚಿಕಿತ್ಸೆಯನ್ನು ನೀಡದೆ, ಬೇಜವಾಬ್ದಾರಿತನ್ನವನ್ನು ಮರೆದಿರುವ ಅಪೊಲೊ ಆಸ್ಪತ್ರೆಯ ಮೇಲೆ ಶಿಸ್ತಿನ ಕ್ರಮವನ್ನು ತೆಗೆದುಕೊಳ್ಳುವುದಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ. ಕೊರೊನಾ ನಂತರದ ದಿನಗಳಲ್ಲಿ ನಿಜಕ್ಕೂ ಆಸ್ಪತ್ರೆಗಳಲ್ಲಿ ಜನರಿಗೆ ಚಿಕಿತ್ಸೆ ಸೂಕ್ತವಾಗಿ ಲಭ್ಯವಾಗುದೇ ಇರುವುದು ಪರಿಸ್ಥಿತಿಯ ತೀವ್ರತೆಗೆ ಸಾಕ್ಷಿಯಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here