ಮಹಾಮಾರಿ ಕೋರೋಣ ವೈರಸ್ ಕರ್ನಾಟಕ ರಾಜ್ಯ 2 ಕಾಲಿಟ್ಟಿದ್ದು ಈಗಾಗಲೇ ಬರೋನು ವೈರಸ್ ಸೋಂಕಿನಿಂದ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಕೋರೋನ  ವಿಶ್ವವ್ಯಾಪಿ ತನ್ನ ಪ್ರಭಾವ ಬೀರುತ್ತಿರುವ ಹಿನ್ನೆಲೆಯಲ್ಲಿ ವಿಶ್ವದ ಎಲ್ಲಾ ಕಡೆ ಕೊರೊನ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಕರ್ನಾಟಕ ರಾಜ್ಯದಲ್ಲೂ ಸಹ ಕೊರೊನ ತಡೆಯಲು ಸರ್ಕಾರ ಸಾಕಷ್ಟು ಶ್ರಮವಹಿಸಿ ಕೆಲಸಗಳನ್ನು ಮಾಡುತ್ತಿದೆ. ಇದೀಗ ಕೊರೊನ  ವೈರಸ್ ಬಗ್ಗೆ ನಾಡಿನ ಪ್ರಖ್ಯಾತ ಇನ್ಫೋಸಿಸ್ ಕಂಪನಿಯ ಮುಖ್ಯಸ್ಥರಾದ ಡಾ. ಸುಧಾಮೂರ್ತಿ ಅವರು ಸರ್ಕಾರವು ನಮಗೆ ಒಂದು ಆಸ್ಪತ್ರೆಯನ್ನು ನೀಡಿದರೆ ನಾವು ಆ ಆಸ್ಪತ್ರೆಯ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡು ಚಿಕಿತ್ಸೆ ನಿರ್ವಹಣೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ನಾವು ಕೈಗೊಳ್ಳುತ್ತೇವೆ ಎಂದು ಸರ್ಕಾರಕ್ಕೆ ಸುಧಾಮೂರ್ತಿ ಅವರು ಮನವಿ ಮಾಡಿದ್ದಾರೆ. ಈ ಬಗ್ಗೆ ರಾಜ್ಯದ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಸುಧಾಮೂರ್ತಿ ಅವರು ಸರ್ಕಾರಕ್ಕೆ   ಬರೆದಿರುವ ಪತ್ರದ ಬಗ್ಗೆ ಮಾಹಿತಿ ನೀಡಿದ್ದಾರೆ. ಪತ್ರದ ಮಾಹಿತಿ ಈ ಕೆಳಗಿನಂತಿದೆ…..

“ನಿನ್ನೆ ಬೆಳಿಗ್ಗೆ ನನಗೆ Infosys Foundation ಕಛೇರಿಯಿಂದ ಕರೆ ಬಂದಿತ್ತು.‌ ಶ್ರೀಮತಿ ಸುಧಾಮೂರ್ತಿ ಯವರು ಮಾತನಾಡಿ ದೇಶ-ವಿದೇಶಗಳಲ್ಲಿ ಆತಂಕ ತಂದಿರುವ ಕರೋನಾವೈರಸ್ ವ್ಯಾಪಕವಾಗಿ ಹರಡದಂತೆ ನಮ್ಮ ರಾಜ್ಯದಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದರು.ಒಂದು ಆಸ್ಪತ್ರೆಯನ್ನು ತಮಗೆ ವಹಿಸಿದರೆ ಅದನ್ನು ಕೊರೋನಾವೈರಸ್ ಚಿಕಿತ್ಸೆಗಾಗಿ ತಮ್ಮ ಸಂಸ್ಥೆಯ ವೆಚ್ಚದಲ್ಲಿ ಪೂರ್ಣಪ್ರಮಾಣದಲ್ಲಿ ಸಜ್ಜುಗೊಳಿಸುವುದಾಗಿ, ಅಗತ್ಯ ಉಪಕರಣಗಳನ್ನೂ ಒದಗಿಸುವುದಾಗಿ ಹೇಳಿದರು.ಅಷ್ಟೇ ಅಲ್ಲ, ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಆರೋಗ್ಯ ಸಚಿವ ಶ್ರೀರಾಮುಲು ರೊಂದಿಗೂ ತಮ್ಮ ಈ ಪಾತ್ರದ ಕುರಿತು ಚರ್ಚಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳಿಗೂ ಈ ಬಗ್ಗೆ ಪತ್ರ ಬರೆದಿದ್ದಾರೆ.ಸದ್ಯದಲ್ಲಿಯೇ ಈ ಕುರಿತು ಉನ್ನತಮಟ್ಟದ ಸಭೆ ನಡೆಯಲಿದೆ.‌ ನಿನ್ನೆ ಸಂಜೆ ಸುಧಾಮೂರ್ತಿ ಯವರಿಗೆ ಫೋನ್ ಮಾಡಿ ನಮ್ಮ ಶಿಕ್ಷಣ ಇಲಾಖೆಯಲ್ಲಿ‌ ಮಕ್ಕಳ ಹಿತವನ್ನು‌ ಗಮನದಲ್ಲಿಟ್ಟುಕೊಂಡು ಶಾಲೆಗಳಿಗೆ ರಜೆ ಘೋಷಿಸಿರುವ ಕ್ರಮ ವಿವರಿಸಿದೆ. ಇಷ್ಟು ಬೇಗ ಕ್ರಮ ತೆಗೆದುಕೊಂಡಿರುವ ಬಗ್ಗೆ ತಮ್ಮ ಸಂತಸ ವ್ಯಕ್ತಪಡಿಸಿದರು‌‌.ಈ ಹೃದಯವಂತಿಕೆ ನನ್ನ ಹೃದಯ ತುಂಬಿತು.‌ ನಿಜವಾದ ಮಾತೃಕಾಳಜಿ ಈ ಮಹಾತಾಯಿಯದು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here