ಬಿಜೆಪಿಯಿಂದ ಸುಮಲತಾಗೆ ನಾವು ಬೆಂಬಲ ಕೊಟ್ಟಿದ್ದೇವೆ. ಉಪಚುನಾವಣೆಯಲ್ಲಿ ಸುಮಲತಾ ನಮಗೂ ಬೆಂಬಲ ಕೊಡಲೇಬೇಕು ಎಂದು ಹೇಳಿದ್ದಾರೆ ಸಂಸದೆ ಶೋಭಾ ಕರಂದ್ಲಾಜೆಯವರು. ಬರಲಿರುವ ಉಪಚುನಾವಣೆಯಲ್ಲಿ ಸುಮಲತಾ ಅವರು ಯಾರಿಗೆ ಬೆಂಬಲ ನೀಡಲಿದ್ದಾರೆ ಎನ್ನುವ ವಿಷಯದ ಬಗ್ಗೆ ಚಿಕ್ಕಮಗಳೂರಿನಲ್ಲಿ ಮಾತನಾಡುವ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರು “ನಾವು ಬೆಂಬಲ ಕೊಟ್ಟಿದ್ದರಿಂದ ಸುಮಲತಾ ಕೂಡ ಬೆಂಬಲ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದಿದ್ದು, ನಾವು ಅವರನ್ನು ಬೆಂಬಲಿಸಿ ಎಂದು ಒತ್ತಾಯ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಶೋಭಾ ಅವರು ಮಾತನಾಡುತ್ತಾ, ಸುಮಲತ ಅವರೇ ಕೇಂದ್ರ, ರಾಜ್ಯ ಸರ್ಕಾರಕ್ಕೆ ನನ್ನ ಬೆಂಬಲ ಎಂದು ಹೇಳಿರುವುದರಿಂದ, ಈಗ ಏನು ಬದಲಾವಣೆ ಆಗಿದ್ಯೋ ಗೊತ್ತಿಲ್ಲ ಎಂದು ಕೂಡಾ ಹೇಳಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ ನಡೆಸಿದ ಶೋಭಾ ಅವರು ಸಿದ್ದರಾಮಯ್ಯ ಅಂದ್ರೆ ಸುಳ್ಳು, ಸುಳ್ಳು ಅಂದ್ರೆ ಸಿದ್ದರಾಮಯ್ಯ ಎಂದು ವ್ಯಂಗ್ಯವಾಡಿದ್ದಾರೆ. ಸಿದ್ಧರಾಮಯ್ಯ ಅವರ ಅನ್ನ ಭಾಗ್ಯ ಯೋಜನೆ ನನ್ನದು ಅಂತಾರೆ, ಅವರು ಸುಳ್ಳು ಹೇಳಿಕೊಂಡು ಓಡಾಡ್ತಿದ್ದಾರೆ ಎಂದು ಜರೆಯುತ್ತಾ, ಅದು ಕೇಂದ್ರ ಸರ್ಕಾರದ ಯೋಜನೆ, ಕೇಂದ್ರದ ಯೋಜನೆಯನ್ನು ನನ್ನದು ಅನ್ನುವ ಅವರ ಸ್ವಂತ ಸಾಧನೆ ಏನೆಂದು ಪ್ರಶ್ನೆ ಮಾಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಃಪತನದ ಹಾದಿಯಲ್ಲಿದ್ದು, ಸಿದ್ದರಾಮಯ್ಯ ಭಾರಿ ಭ್ರಮೆಯಲ್ಲಿ ಇದ್ದಾರೆ. ಕಾಂಗ್ರೆಸ್ ನ ಪತನಕ್ಕೆ ಸಿದ್ದರಾಮಯ್ಯನವರ ಕೊಡುಗೆ ಅಪಾರ, ನಿಜಕ್ಕೂ ಅವರಿಗೆ ಅಭಿನಂದನೆ ಸಲ್ಲಿಸಬೇಕೆಂದು ಹೇಳುತ್ತಾ ಹಾಸ್ಯ ಮಾಡಿದ್ದಾರೆ ಶೋಭಾ ಕರಂದ್ಲಾಜೆ ಅವರು. ಸಿದ್ಧರಾಮಯ್ಯನವರು ಹಣಕಾಸಿನ ಪರಿಸ್ಥಿತಿ ಹದಗೆಡಿಸಿ, ಜಾತಿ ಒಡೆದಿದ್ದಾರೆ ಎಂದು ಕೂಡಾ ಆರೋಪಗಳನ್ನು ಮಾಡಿದ್ದಾರೆ ಶೋಭಾ ಅವರು‌. ಅವರು ದಯಮಾಡಿ ಕಾರಿನಿಂದಿಳಿದು ಮಾತನಾಡಲಿ, ಹಳ್ಳಿಗಳಲ್ಲಿ ಜನರ ಸಮಸ್ಯೆ ಆಲಿಸಲಿ ಎಂದು ಸಲಹೆ ನೀಡಿದ್ದಾರೆ.

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here