ಜೆ.ಎಸ್.ಬಸವರಾಜ್ ತುಮಕೂರಿನ ಬಿಜೆಪಿ ಅಭ್ಯರ್ಥಿ ಅಲ್ಲಿನ ತಮ್ಮ ಪ್ರತಿಸ್ಪರ್ಧಿ ಜೆಡಿಎಸ್ ನ ದೇವೇಗೌಡರಗಿಂತ ಮುಂದೆ ಇದ್ದಾರೆ. ಅವರು 14,000 ಮತಗಳ ಮುನ್ನಡೆ ಸಾಧಿಸಿದ್ದಾರೆ. ನಾಲ್ಕನೇ ಹಂತದ ಎಣಿಕೆಯ ನಂತರ ದೇವೇಗೌಡರಿಗೆ ತೀವ್ರ ಹಿನ್ನಡೆ ಆಗ್ತಿದೆ.

ಹರಿಯಾಣದ ಹತ್ತಕ್ಕೆ ಹತ್ತೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಅಲ್ಲದೆ ಭಾರತದಲ್ಲಿ ಹಲವೆಡೆ ಹಿರಿಯ ನಾಯಕರ ಮಕ್ಕಳೆಲ್ಲಾ ಭಾರೀ ಹಿನ್ನಡೆ ಸಾಧಿಸಿದ್ದಾರೆ.

ಬಾಗಲಕೋಟೆಯಲ್ಲಿ ಪಿಸಿ ಗದ್ದಿಗೌಡರ್ ಕಾಂಗ್ರೆಸ್ ನ ವೀಣಾ ಕಾಶಪ್ಪನವರ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.

ಹಾಸನದಲ್ಲಿ ಪ್ರಜ್ವಲ್ ರೇವಣ್ಣ 71, 000 ಮತಗಳ ಮುನ್ನಡೆ ಸಾಧಿಸಿದ್ದಾರೆ. ಮಂಡ್ಯದಲ್ಲಿ ಸುಮಲತ ಅವರು 1125 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು 24,000 ಮತಗಳ ಹಿನ್ನಡೆಯನ್ನು ಅನುಭವಿಸುತ್ತಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here