ಸಂಸದೆ ಸುಮಲತ ಅಂಬರೀಶ್ ಅವರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅವರಿಗೆ ಕರೆ ಮಾಡಿ ಅವರ ಆರೋಗ್ಯದ ಕುರಿತಾಗಿ ವಿಚಾರಿಸಿದ್ದಾರೆ. ನಿನ್ನೆ ಸುಮಲತ ಅಂಬರೀಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ವಿಚಾರವು ಮಾದ್ಯಮಗಳಲ್ಲಿ ಕೂಡಾ ಸುದ್ದಿಯಾಗಿತ್ತು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿನ್ನೆ ತಡರಾತ್ರಿಯಲ್ಲಿ ಸಂಸದೆ ಸುಮಲತ ಅವರಿಗೆ ದೂರವಾಣಿ ಕರೆಯನ್ನು ಕರೆ ಮಾಡಿ ಅವರ ಯೋಗ ಕ್ಷೇಮವನ್ನು ಕುರಿತಾಗಿ ವಿಚಾರಿಸಿ ಕಾಳಜಿಯನ್ನು ಮೆರೆದಿದ್ದಾರೆ.

ಕರೆ ಮಾಡಿದ ಸಂದರ್ಭದಲ್ಲಿ ಸಿಎಂ ಅವರು “ನಿಮಗೆ ಕೊರೊನಾ ಪಾಸಿಟಿವ್ ಬಂದಿರುವ ವಿಷಯ ನನಗೆ ತಿಳಿದಿದೆ ನಿಮ್ಮ ಆರೋಗ್ಯ ಹೇಗಿದೆ? ಎಂದು ಅವರು ವಿಚಾರಿಸಿದ್ದಾರೆ. ಅಲ್ಲದೇ ಸರ್ಕಾರ ನಿಮ್ಮ ಜೊತೆಗಿದೆ, ನಿಮಗೆ ಯಾವುದೇ ಸಹಕಾರ ಬೇಕಾದರೂ ಸರ್ಕಾರವನ್ನು ಕೇಳಿ. ಆರೋಗ್ಯ ಬೇಗ ಸುಧಾರಿಸಿಕೊಳ್ಳಲಿ, ಆರೋಗ್ಯದ ಬಗ್ಗೆ ಗಮನ ಹರಿಸಿ ಎಂದು ಸಿಎಂ ಅವರು ಸುಮಲತ ಅವರಿಗೆ ಫೋನ್ ನಲ್ಲಿ ಹೇಳಿ, ಸರ್ಕಾರ ಸದಾ ನಿಮ್ಮೊಂದಿಗೆ ಇದೆ ಎಂಬ ಭರವಸೆಯನ್ನು ನೀಡಿದೆ.

ಮಂಡ್ಯ ಉಸ್ತುವಾರಿ ಸಚಿವರು ಆಗಿರುವ ಡಾ.ಕೆ.ಸಿ.ನಾರಾಯಣ ಗೌಡ ಮತ್ತು ಕಂದಾಯ ಸಚಿವರಾದ ಆರ್.ಅಶೋಕ್ ಅವರು ಅವರ ಜೊತೆ ಸಂಪರ್ಕದಲ್ಲಿ ಇರಿ ಎಂದು ಸೂಚನೆ ನೀಡಿರುವ ಮುಖ್ಯಮಂತ್ರಿಯವರು, ನಿಮಗೆ ಏನೆಲ್ಲಾ ವ್ಯವಸ್ಥೆಗಳು ಬೇಕೋ ಅದನ್ನು ಅವರು ಮಾಡುತ್ತಾರೆ ಎಂಬ ಭರವಸೆಯನ್ನು ನೀಡಿದ್ದಾರೆ. ಸುಮಲತ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಮಾನ್ಯ ಮುಖ್ಯಮಂತ್ರಿ ಅವರು ಹಾರೈಸಿದ್ದಾರೆ ಎನ್ನಲಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here