ಕೊರೊನಾ ಆತಂಕದ ನಡುವೆಯೇ ಎಲ್ಲಾ ಸವಾಲುಗಳನ್ನು ಸಮರ್ಪಕವಾಗಿ ಎದುರಿಸುತ್ತಾ ರಾಜ್ಯ ಸರ್ಕಾರವು ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ನಡೆಸಿತ್ತು. ರಾಜ್ಯದಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಬೇಕು ಬೇಡ ಎನ್ನುವ ಚರ್ಚೆಗಳ ಮಧ್ಯೆಯೇ ಮುಂಜಾಗ್ರತಾ ಕ್ರಮಗಳನ್ನು ವಹಿಸಿ, ಆತಂಕದ ನಡುವೆಯೇ ಪರೀಕ್ಷೆಗಳನ್ನು ನಡೆಸಿ ಒಂದು ಮಾದರಿಯನ್ನು ನೀಡಿದ್ದರು ಶಿಕ್ಷಣ ಸಚಿವರು‌‌. ಆದರೆ ಪರೀಕ್ಷಾ ಸಮಯದಲ್ಲಿ ಒಂದು ಆತಂಕವಂತೂ ಖಚಿತವಾಗಿ ಲಕ್ಷಾಂತರ ಮಕ್ಕಳ ಪೋಷಕರಲ್ಲಿ ಸಹಜವಾಗಿಯೇ ಇತ್ತು‌. ಆದರೆ ದೊಡ್ಡ ಮಟ್ಟದ ಯಾವುದೇ ಸಮಸ್ಯೆ ಇಲ್ಲದೆ ಪರೀಕ್ಷೆಗಳು ಮುಗಿದಿತ್ತು.

ಈಗ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಆದರೆ ಈ ಬಗ್ಗೆ ಸರ್ಕಾರ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಯಾವಾಗ? ಎಂಬುದನ್ನು ಎಲ್ಲೂ ಕೂಡಾ ಅಧಿಕೃತವಾಗಿ ಹೇಳಿಲ್ಲ. ಅದರ ಹೊರತಾಗಿಯೂ ಹೇಗೋ ನಾಳೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಎಂಬ ಸುದ್ದಿಯೊಂದು ಎಲ್ಲರಲ್ಲೂ ಗೊಂದಲವನ್ನು ಉಂಟು ಮಾಡಿತ್ತು. ಮಾದ್ಯಮವೊಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಯಾವ ವೆಬ್ಸೈಟ್ ಗಳಲ್ಲಿ ಲಭ್ಯವಿರಲಿದೆ ಎಂದೆಲ್ಲಾ ಪ್ರಕಟಿಸಿದ ಮಾಹಿತಿ ಬಹುಶಃ ಇಂತಹುದೊಂದು ಗೊಂದಲಕ್ಕೆ ಕಾರಣವಾಗಿರಬಹುದು.

ಆದರೆ ಈ ಗೊಂದಲ, ಅನುಮಾನಕ್ಕೆ ತೆರೆ ಎಳೆದಿದ್ದಾರೆ‌ ರಾಜ್ಯದ ಶಿಕ್ಷಣ ಸಚಿವರಾದ ಮಾನ್ಯ ಸುರೇಶ್ ಕುಮಾರ್ ಅವರು. ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ನಾಳೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯವಲ್ಲ, ಇನ್ನೂ ದಿನಾಂಕ ನಿಶ್ಚಯವಾಗಿಲ್ಲ ಎಂದು ತಿಳಿಸಿದ್ದಾರೆ. ಈ ಮೂಲಕ ನಾಳೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಫಲಿತಾಂಶ ಎಂದು ಹರಡಿರುವ ಸುದ್ದಿ ಸುಳ್ಳು ಎಂದು ಸ್ಪಷ್ಟೀಕರಣವನ್ನು ನೀಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here