ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 154ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ 1,900ಕ್ಕೂ ಹೆಚ್ಚು ಸ್ಥಳಗಳಲ್ಲಿ 2.5 ಲಕ್ಷಕ್ಕೂ ಹೆಚ್ಚು ಮಂದಿಯಿಂದ ಸ್ವಚ್ಛತಾ ಹೀ ಸೇವಾ ಶ್ರಮದಾನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.
‘ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣಾ ವಿಭಾಗದಿಂದ ನಗರದ ಕೆರೆಗಳು, ರೈಲ್ವೆ ನಿಲ್ದಾಣ, ರಸ್ತೆ ಬದಿ, ಸೇತುವೆಯ ಕೆಳಗೆ, ಮೇಲ್ಸೇತುವೆ ಕೆಳಗೆ, ಕೊಳೆಗೇರಿ ಪ್ರದೇಶಗಳು, ಮಾರುಕಟ್ಟೆ ಸ್ಥಳಗಳು, ಆರಾಧನೆ ಸ್ಥಳಗಳು, ಉದ್ಯಾನವನಗಳು, ಬಸ್ ನಿಲ್ದಾಣಗಳು, ಪ್ರಮುಖ ಜಂಕ್ಷನ್ ಗಳು, ಶಾಲಾ/ಕಾಲೇಜುಗಳ ಸುತ್ತಮುತ್ತಲಿನ ಪ್ರದೇಶ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ನಾಗರೀಕರು, ಸ್ಥಳೀಯ ಎನ್ಜಿಒಗಳು, ಎನ್ಎಸ್ಎಸ್/ಎನ್ಸಿಸಿ ವಿದ್ಯಾರ್ಥಿಗಳು, ಆರ್ಡಬ್ಲ್ಯುಎಗಳು, ಸ್ವಯಂ ಸೇವಕರು, ಬಿಎಸ್ಎಫ್ ಯೋಧರು, ಅಗ್ಲಿ ಇಂಡಿಯನ್ಸ್, ಸರ್ಕಾರಿ ಅಧಿಕಾರಿಗಳು, ಪೌರಕಾರ್ಮಿಕರು ಸೇರಿದಂತೆ ಇನ್ನಿತರರು ಸ್ವಚ್ಛತಾ ಕಾರ್ಯದಲ್ಲಿ ಪಲ್ಗೊಂಡು ತ್ಯಾಜ್ಯವನ್ನು ತೆರವುಗೊಳಿಸಲಾಯಿತು.
ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದ ಸ್ವಚ್ಛತಾ ಅಭಿಯಾನದ ಮೊದಲು ಮತ್ತು ನಂತರದ ಫೋಟೊ, ವಿಡಿಯೊಗಳನ್ನು ಸ್ವಚ್ಛತಾ-ಹೀ-ಸೇವಾ(https://swachhatahiseva.com/) ವೆಬ್ ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡಲಾಗುವುದು.
20-25 ಟನ್ ತ್ಯಾಜ್ಯ ಸಂಗ್ರಹ:
ಸ್ವಚ್ಛತಾ ಅಭಿಯಾನದ ವೇಳೆ ರಸ್ತೆಗಳು, ಬೀದಿ ಮತ್ತು ಇನ್ನಿತರೆ ಸ್ಥಳಗಳು ಸೇರಿಂದಂತೆ ಅಂದಾಜು 4,000 ಕಿ.ಮೀ ಪ್ರದೇಶದಲ್ಲಿ ಸುಮಾರು 20-25 ಟನ್ಗಳಷ್ಟು ತ್ಯಾಜ್ಯವನ್ನು ಸಂಗ್ರಹಿಸಲಾಗಿದೆ. ಸಂಗ್ರಹವಾದ ತ್ಯಾಜ್ಯವನ್ನು ಒಣ ಹಾಗೂ ಹಸಿ ತ್ಯಾಜ್ಯವನ್ನು ಬೇರ್ಪಡಿಸಿ ಆಟೋ ಟಿಪ್ಪರ್ ಗಳ ಮೂಲಕ ಕಾಂಪ್ಯಾಕ್ಟರ್ ಗಳಿಗೆ ಹಾಕಿ ತ್ಯಾಜ್ಯವನ್ನು ವಿಲೇವಾರಿ ಮಾಡಲಾಯಿತು
ತ್ಯಾಜ್ಯ ಬಿಸಾಡದಂತೆ ನಾಗರಿಕರಲ್ಲಿ ಜಾಗೃತಿ ಮೂಡಿಸಲಾಯಿತು:
ನಗರದಾದ್ಯಂದ ಹಮ್ಮಿಕೊಂಡಿದ್ದ ಇಂದಿನ ಸ್ವಚ್ಛತಾ ಅಭಿಯಾನದ ವೇಳೆ ರಸ್ತೆಗಳ ಬದಿ ಕಸ ಬಿಸಾಡದಂತೆ ಹಾಗೂ ಎಲ್ಲೆಡೆ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಯಿತು.
ಆಡಳಿತಗಾರರಾದ ರಾಕೇಶ್ ಸಿಂಗ್ ರವರ ನೇತೃತ್ವದಲ್ಲಿ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಬಸವರಾಜ್ ಕಬಾಡೆ ರವರು ಸೇರಿದಂತೆ ಇನ್ನಿತರರು ಕೋರಮಂಗಲದ 80 ರಸ್ತೆಯ ಪಾಸ್ ಪೋರ್ಟ್ ಕಛೇರಿ ಬಳಿ ಸ್ವಚ್ಛತಾ ಕಾರ್ಯ ನಡೆಸಿದರು.
ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರ ನೇತೃತ್ವದಲ್ಲಿ, ಯಲಹಂಕ ವಲಯ ಜಂಟಿ ಆಯುಕ್ತರಾದ ಮೊಹ್ಮದ್ ನಹೀಮ್ ಮೊಮಿನ್ ಸೇರಿದಂತೆ ಇನ್ನಿತರರು ಯಲಹಂಹ ಹೋಲ್ಡ್ ಟೌನ್, ಸರ್ಕಾರಿ ಆಸ್ಪತ್ರೆ ರಸ್ತೆ, ರೈಲ್ವೆ ನಿಲ್ದಾಣ ರಸ್ತೆ, ಎಕೆ ಕಾಲೋನಿ ಸುತ್ತಮುತ್ತಲ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.
ಮಾನ್ಯ ನಿವೃತ್ತ ನ್ಯಾಯಮೂರ್ತಿ ಹಾಗೂ ಎನ್.ಜಿ.ಟಿ ರಾಜ್ಯ ಮಟ್ಟದ ಸಮಿತಿಯ ಅಧ್ಯಕ್ಷರಾದ ಸುಭಾಷ್ ಬಿ. ಆಡಿ ರವರು ಸಂಜಯ್ ನಗರ ಸುತ್ತಮುತ್ತಲ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ರಂದೀಪ್ ರವರ ನೇತೃತ್ವದಲ್ಲಿ ಡಾಲರ್ಸ್ ಕಾಲೋನಿಯ ಮುಖ್ಯ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.
ವಿಶೇಷ ಆಯುಕ್ತರಾದ ಡಾ. ಹರೀಶ್ ಕುಮಾರ್ ರವರ ನೇತೃತ್ವದಲ್ಲಿ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಟನ್ ಪೇಟೆ ಮುಖ್ಯರಸ್ತೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.
ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರಾದ ಪ್ರತಿಭಾ ರವರ ನೇತೃತ್ವದಲ್ಲಿ ಉಚ್ಛ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಧೀಶರು, ನ್ಯಾಯಾಲಯದ ರಿಜಿಸ್ಟರ್ ಗಳು, ಕಬ್ಬನ್ ಪಾರ್ಕ್ ನ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸಿದರು.
ಹಿರಿಯ ನಾಗರಿಕೆ ಗೌರವ ಸಮರ್ಪಣೆ:
ಈ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಆಯಾ ವಲಯ ವ್ಯಾಪ್ತಿಯಲ್ಲಿ ಗೌರವ ಸಮರ್ಪಣೆ ಮಾಡಿ ಪ್ರಶಂಸನಾ ಪತ್ರವನ್ನು ವಿತರಿಸಲಾಯಿತು.
ಸ್ವಚ್ಛ ಸರ್ವೇಕ್ಷಣ್-2023’ ಅನುಸರಣೆಗಾಗಿ ಪಾಲಿಕೆ ವ್ಯಾಪ್ತಿಯಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಸಂಸದರು, ಸ್ಥಳೀಯ ಶಾಸಕರುಗಳು, ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ವಿಶೇಷ ಆಯುಕ್ತರಾದ ಡಾ. ಹರೀಶ್ ಕುಮಾರ್, ಎಲ್ಲಾ ವಲಯ ಜಂಟಿ ಆಯುಕ್ತರು, ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡು ಸ್ವಚ್ಛತಾ ಕಾರ್ಯವನ್ನು ನಡೆಸಿದರು.
Disclaimer: This Story is auto-aggregated by a Syndicated Feed and has not been Created or Edited By City Big News Staff.