ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದ ಬಡ ಜನರಿಗೆ ಸಿಹಿ ಸುದ್ದಿಯನ್ನು ನೀಡಿದ್ದು ಮನೆ ಇಲ್ಲದವರಿಗೆ ಮನೆ ಕಟ್ಟಿಸಿಕೊಳ್ಳುವ ವ್ಯವಸ್ಥೆಯನ್ನುಮಾಡಲು ಸರ್ಕಾರ ಮುಂದಾಗಿದೆ.
ಹೌದು, ರಾಜ್ಯದಲ್ಲಿ ಮನೆ ಇಲ್ಲದ ಬಡವರಿಗೆ ಕಾಲಮಿತಿಯೊಳಗೆ ವಸತಿ ಯೋಜನೆ ಪೂರ್ಣಗೊಳಿಸಲು ಸಚಿವ ಜಮೀರ್ ಅಹಮ್ಮದ್ ಖಾನ್ ಗಡುವು ನೀಡಿದ್ದಾರೆ.
ರಾಜೀವ್ ಗಾಂಧಿ ವಸತಿ ನಿಗಮದಿಂದ ರಾಜ್ಯದಲ್ಲಿ ಕೈಗೊಂಡ ವಸತಿ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು.
ನಿಗಮದಿಂದ 47,882 ಕುಟುಂಬಗಳಿಗೆ ವಸತಿ ಕಲ್ಪಿಸುವ 42 ಯೋಜನೆ ಕೈಗೊಳ್ಳಲಾಗಿದೆ. ಆದರೆ 4665 ಮನೆಗಳು ಮಾತ್ರ ಪೂರ್ಣಗೊಂಡಿವೆ ಎಂಬ ಮಾಹಿತಿ ಪಡೆದ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಮಗಾರಿಯ ಪ್ರಗತಿ ವರದಿ ಸಲ್ಲಿಸಿ ಅನುದಾನ ಕೊರತೆ ಅಥವಾ ಬೇರೆ ಸಮಸ್ಯೆ ಇದ್ದರೆ ತಿಳಿಸಿ ಎಂದು ಸಚಿವರು ತಾಕೀತು ಮಾಡಿದ್ದಾರೆ. ಕೆಲಸ ಪೂರ್ಣವಾಗದಿದ್ದರೂ ಕೆಲವೆಡೆ ಹಣ ಬಿಡುಗಡೆಯಾಗಿದ್ದು, ಇನ್ನೂ ಮುಂದೆ ಈ ರೀತಿ ಪ್ರಮಾದ ಆಗದಂತೆ ಎಚ್ಚರಿಕೆ ವಹಿಸಬೇಕು. ಫಲಾನುಭವಿಗಳ ವಂತಿಗೆ ಪಡೆದುಕೊಳ್ಳದೆ, ಬ್ಯಾಂಕ್ ಸಾಲದ ಖಾತರಿ ಇಲ್ಲದೆ ಹಂಚಿಕೆ ಪತ್ರ ನೀಡುವಂತಿಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರ ಒಂದು ಲಕ್ಷ ಮನೆ ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಒಂದು ತಿಂಗಳಲ್ಲಿ 12 ಸಾವಿರ ಮನೆ ಹಂಚಿಕೆಗೆ ಫಲಾನುಭವಿಗಳಿಗೆ ಸಾಲ ವ್ಯವಸ್ಥೆ ಮಾಡಿಸಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಬೀಗ ಹಸ್ತಾಂತರಕ್ಕೆ ಸಿದ್ಧತೆ ಮಾಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
Disclaimer: This Story is auto-aggregated by a Syndicated Feed and has not been Created or Edited By City Big News Staff.